ಚಿತ್ರದುರ್ಗದಲ್ಲಿ ಸ್ವಾಮೀಜಿ ಹಾಗೂ ಬಿಜೆಪಿಯ ಇಬ್ಬರು ಶಾಸಕರಿಗೆ ಪ್ರಾಣ ಬೆದರಿಕೆ ಸಂದೇಶ ಕಳುಹಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ಆರೋಪಿ ಸ್ಫೋಟ ಅಂಶವನ್ನು ಬಾಯ್ಬಿಟ್ಟಿದ್ದಾನೆ.
ಚಿತ್ರದುರ್ಗ, (ಜುಲೈ.17): ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶಾಸಕರಾದ, ಗೂಳಿಹಟ್ಟಿ ಡಿ.ಶೇಖರ್ ಹಾಗೂ ಎಂ.ಚಂದ್ರಪ್ಪರಿಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಚಿಕ್ಕಬಳ್ಳಾಪುರದ ಡಾ.ತಿಪ್ಪೇರುದ್ರಸ್ವಾಮಿ ಬಂಧಿತ ಆರೋಪಿ. ಆರೋಪಿ ಮುದ್ದೇನಹಳ್ಳಿಯ ಸತ್ಯಸಾಯಿ ಸರಳ ಆಸ್ಪತ್ರೆಯ ವೈದ್ಯನಾಗಿದ್ದಾನೆ. ತಿಪ್ಪೇರುದ್ರ ಸ್ವಾಮಿ ವಡ್ಡೆ ಸೇನಾ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಎಂದು ತಿಳಿದುಬಂದಿದೆ. ಚಿತ್ರದುರ್ಗದ ಭೋವಿ ಮಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀ, ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್, ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಸೇರಿ ಹಲವರಿಗೆ ಪ್ರಾಣ ಬೆದರಿಕೆ ಸಂದೇಶ ರವಾನಿಸಲಾಗಿತ್ತು. KSP APP ಮೂಲಕ ಜಿಲ್ಲಾ ಪೊಲೀಸ್ ಕಚೇರಿಗೆ ಇದೇ ಜುಲೈ 14ರಂದು ಸಂದೇಶ ಕಳುಹಿಸಲಾಗಿತ್ತು.
undefined
ಭೋವಿ ಶ್ರೀ ಸೇರಿ ಇಬ್ಬರು ಶಾಸಕರಿಗೆ ಕೊಲೆ ಬೆದರಿಕೆ ಸಂದೇಶ
ವಡ್ಡರ ಸಂಘದ ಕೆಲವರಿಗೆ ಬೆದರಿಸಲು KSP APP ಗೆ ಸಂದೇಶ ಕಳುಸಿದ್ದಾಗಿ ತಪ್ಪೊಪ್ಪಿಕೊಂಡಿರೋ ಆರೋಪಿ. ಗಣ್ಯರ ಜತೆ ತನ್ನ ಹೆಸರನ್ನು ಸೇರಿಸಿ ಪ್ರಾಣ ಬೆದರಿಕೆಯಿದೆ ಎಂಬ ಸಂದೇಶ ಕಳುಹಿಸಲಾಗಿತ್ತು. ಗಣ್ಯರ ಹೆಸರು ಬಳಸಿದರೆ ಪ್ರಕರಣ ಸೂಕ್ಷ್ಮಗೊಳ್ಳುತ್ತದೆಂಬ ಕಾರಣಕ್ಕೆ ಸಂದೇಶ ಕಳುಹಿಸಿದ್ದ ಆರೋಪಿ ಡಾ.ತಿಪ್ಪೇರುದ್ರಸ್ವಾಮಿ ಪೊಲೀಸ್ ತನಿಖೆ ವೇಳೆ ಸತ್ಯಾಂಶ ಬಾಯ್ಬಿಟ್ಟಿದ್ದಾನೆ ಎಂದು ಚಿತ್ರದುರ್ಗ ಎಸ್ಪಿ ಕೆ.ಪರಶುರಾಮ್ ಮಾದ್ಯಮಗಳಿಗೆ ಮಾಹಿತಿ ನೀಡಿದರು.
ಬೋವಿಮಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀ, ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್, ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಸೇರಿ ಹಲವರಿಗೆ KSP APP ಮೂಲಕ ಜಿಲ್ಲಾ ಪೊಲೀಸ್ ಕಚೇರಿಗೆ ಪ್ರಾಣ ಬೆದರಿಕೆ ಸಂದೇಶ ನೀಡಿದ್ದ. ಕರ್ನಾಟಕ ರಾಜ್ಯ ಪೊಲೀಸ್ ಆ್ಯಪ್ ಮೂಲಕ ಚಿತ್ರದುರ್ಗ ಪೊಲೀಸರಿಗೆ ಸಂದೇಶ ಬಂದಿದೆ. ಭೋವಿ ಸಮುದಾಯಕ್ಕೆ ಸೇರಿದ ಹಲವು ಮುಖಂಡರು ಹಾಗೂ ಅವರ ಕುಟುಂಬ ಅಪಾಯದಲ್ಲಿದೆ ಎಂದು ಸಂದೇಶದಲ್ಲಿ ಎಚ್ಚರಿಕೆ ನೀಡಲಾಗಿತ್ತು. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಂಡಿದ್ದರು.