
ಹಲಗೂರು (ನ.18): ಕೆಲವು ತಿಂಗಳ ಹಿಂದೆ ತಾಯಿ ಮರಣ ಹೊಂದಿದ್ದ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆ ಗೊಂಡ ವ್ಯಕ್ತಿ ಕೆರೆಗೆ ಹಾರಿ ಆತ್ಮ*ತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ದೇವಿರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹನೂರು ತಾಲೂಕು ಬಂಡಳ್ಳಿ ಬಳಿ ಇರುವ ಸಾಗ್ಯ ಗ್ರಾಮದ ನವೀನ್ ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ಬಂಡಳ್ಳಿ ಬಳಿ ಇರುವ ಸಾಗ್ಯ ಗ್ರಾಮದ ಪರಶಿವಮೂರ್ತಿ ಅವರ ಪುತ್ರ ನವೀನ್ ಕುಮಾರ್ (25) ಕೆರೆಗೆ ಹಾರಿ ಆತ್ಮ*ತ್ಯೆ ಮಾಡಿಕೊಂಡ ದುರ್ದೈವಿ.
ನವೀನ್ ಕುಮಾರ್ ಬೆಂಗಳೂರಿನಲ್ಲಿ ಜೀವನೋಪಯೋಗಕ್ಕಾಗಿ ಕೆಲಸ ಮಾಡಿಕೊಂಡಿದ್ದನು. ಕೆಲವು ತಿಂಗಳ ಹಿಂದೆ ಅವರ ತಾಯಿ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡಿದ್ದನು. ಈತ ತಮ್ಮ ಸ್ವಗ್ರಾಮಕ್ಕೆ ಹೋಗುವ ಮಾರ್ಗ ಮಧ್ಯ ಸಿಗುವ ಹಲಗೂರು ಸಮೀಪದ ದೇವಿರಹಳ್ಳಿ ಕೆರೆ ಬಳಿ ತಮ್ಮ ವಾಹನವನ್ನು ನಿಲ್ಲಿಸಿ ಕೆರೆಗೆ ಹಾರಿ ಆತ್ಮ*ತ್ಯೆ ಮಾಡಿಕೊಂಡಿನೆ.
ವಿಷಯ ತಿಳಿದ ಹಲಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವವನ್ನು ಹೊರ ತೆಗೆದು ಶವ ಪರೀಕ್ಷೆ ನಡೆಸಿದ ನಂತರ ಶವವನ್ನು ವಾರಸುದಾರಿಗೆ ನೀಡಲಾಯಿತು. ಸಬ್ ಇನ್ಸ್ ಪೆಕ್ಟರ್ ಲೋಕೇಶ್ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ