
ವಿಜಯಪುರ, (ಸೆ.25): ತನ್ನ ಸಂಬಂಧಿ ಜತೆಗೆ ಪತ್ನಿ ಅನೈತಿಕ ಸಂಬಂಧ (ಈllicit ಋelationship) ಹೊಂದಿರುವುದಕ್ಕೆ ಮನನೊಂದು ಪತಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಿಜಯಪುರ(Vijayapura) ಜಿಲ್ಲೆಯ ತಾಳಿಕೋಟಿ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ವೆಂಕಟೇಶ ದ್ವಾರನಹಳ್ಳಿ (25 ವ) ಆತ್ಮಹತ್ಯೆ (suicide) ಮಾಡಿಕೊಂಡ ದುರ್ದೈವಿ.
ಪ್ರೀತಿಸಿ ಓಡಿಹೋಗಿದ್ದ ಜೋಡಿಗೆ 'ಟೈರ್ ಮೆರವಣಿಗೆ' ಶಿಕ್ಷೆ
ವೆಂಕಟೇಶ ಆತ್ಮಹತ್ಯೆಗೆ ಮುನ್ನ ಫೇಸ್‌ಬುಕ್‌ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂದೇಶ ಹಾಕಿ ಜಮೀನಿನಲ್ಲಿ ಮರಕ್ಕೆ ನೇಣಿಗೆ ಶರಣಾಗಿದ್ದಾನೆ. ತನ್ನ ಸಾವಿಗೆ ಪಕ್ಕದ ಮನೆಯ ಶ್ರೀಶೈಲನೇ ಕಾರಣ ಎಂದು ಹೇಳಿಕೊಂಡಿದ್ದಾನೆ,
ವಿಷಯ ತಿಳಿದ ಸ್ನೇಹಿತರು, ಕುಟುಂಬ ಸದಸ್ಯರು ಕೂಡಲೇ ಸ್ಥಳಕ್ಕೆ ಧಾವಿಸಿ, ರಕ್ಷಿಸಲು ಮುಂದಾಗಿದ್ದಾರೆ. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.
ವೆಂಕಟೇಶ ಎರಡು ವರ್ಷಗಳ ಹಿಂದೆ ಪ್ರೀತಿಸಿದ ಯುವತಿ ಜೊತೆ ಮದುವೆಯಾಗಿದ್ದ. ಆದರೆ ಈಚೆಗೆ ವೆಂಕಟೇಶನ ಪತ್ನಿ ಪಕ್ಕದ ಮನೆಯ ಶ್ರೀಶೈಲ ಎಂಬಾತನ ಜೊತೆ ಮನೆಬಿಟ್ಟು ಪರಾರಿಯಾಗಿದ್ದಳು.
ವೆಂಕಟೇಶ ದೂರು ನೀಡಿದ ಬಳಿಕ ತಾಳಿಕೋಟೆ ಪೊಲೀಸರು ಕರೆತಂದರೂ ವೆಂಕಟೇಶ ತನಗೆ ಬೇಡ, ನಾನು ಶ್ರೀಶೈಲನ ಜೊತೆಯೇ ಇರುವುದಾಗಿ ಹಠ ಹಿಡಿದಿದ್ದಳು. ಪರಿಣಾಮ ಪೊಲೀಸರು ಆಕೆಯನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳಿಸಿದ್ದರು.
ಇದರಿಂದ ಮನನೊಂದ ವೆಂಕಟೇಶ ಫೇಸ್‌ಬುಕ್ ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಸಂದೇಶ ಹಾಕಿ ನೇಣಿಗೆ ಶರಣಾಗಿದ್ದಾನೆ. ಈ ಬಗ್ಗೆ ತಾಳಿಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ