ವ್ಯವಹಾರದಲ್ಲಿ ನಷ್ಟ ಉಂಟಾದ ಪರಿಣಾಮ ಜೀವನದಲ್ಲಿ ಜಿಗುಪ್ಸೆ ಹೊಂದಿದ ವ್ಯಕ್ತಿ ಕೊಟ್ಟಿಗೆಯಲ್ಲಿ ನೇಣಿಗೆ ಶರಣಾದ ಘಟನೆ ಶಿವಮೊಗ್ಗ ತಾಲೂಕಿನ ಮತ್ತೂರು ಗ್ರಾಮದ ನಡೆದಿದೆ. ಸ್ವಾಮಿನಾಥ್ (48) ಆತ್ಮಹತ್ಯೆ ಮಾಡಿಕೊಂಡವರು.
ಶಿವಮೊಗ್ಗ (ಜು.12): ವ್ಯವಹಾರದಲ್ಲಿ ನಷ್ಟ ಉಂಟಾದ ಪರಿಣಾಮ ಜೀವನದಲ್ಲಿ ಜಿಗುಪ್ಸೆ ಹೊಂದಿದ ವ್ಯಕ್ತಿ ಕೊಟ್ಟಿಗೆಯಲ್ಲಿ ನೇಣಿಗೆ ಶರಣಾದ ಘಟನೆ ಶಿವಮೊಗ್ಗ ತಾಲೂಕಿನ ಮತ್ತೂರು ಗ್ರಾಮದ ನಡೆದಿದೆ. ಸ್ವಾಮಿನಾಥ್ (48) ಆತ್ಮಹತ್ಯೆ ಮಾಡಿಕೊಂಡವರು. ಇವರು ಶಿವಮೊಗ್ಗ ಬಿ.ಎಚ್ ರಸ್ತೆಯಲ್ಲಿ ಕೃಷಿ ಹಾಗೂ ಗೃಹ ಬಳಕೆ ಉತ್ಪನ್ನಗಳ ಮಾರಾಟ ಮಳಿಗೆ ತೆರೆದಿದ್ದರು. ವ್ಯವಹಾರಕ್ಕಾಗಿ ಲಕ್ಷಾಂತರ ರೂ. ಸಾಲ ಮಾಡಿದ್ದರು ಎನ್ನಲಾಗಿದೆ. ಈ ಹಿಂದೆ ಅವರು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ಸಕಾಲದಲ್ಲಿ ಚಿಕಿತ್ಸೆ ದೊರೆತ ಪರಿಣಾಮ ಜೀವ ಉಳಿದಿತ್ತು. ಸದ್ಯ ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕುಡಿದ ಅಮಲಿನಲ್ಲಿ ಬೆಂಕಿ ಹೆಚ್ಚಿಕೊಂಡು ಯುವಕ ಆತ್ಮಹತ್ಯೆ: ಕುಡಿದ ಅಮಲಿನಲ್ಲಿ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಚನ್ನಪ್ಪನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾರಾಯಣ ಅವರ ಪುತ್ರ ಸುರೇಶ (24) ಮೃತ ಯುವಕ. ವಿಪರೀತ ಕುಡಿತದ ಚಟ ಹೊಂದಿದ್ದ ಯುವಕ ಹೊಟ್ಟೆನೋವಿನಿಂದ ಬಳಲುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳುತ್ತಿದ್ದನು. ಈತನ ಸಂಬಂಧಿಕರು ಸಮಾಧಾನಪಡಿಸುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಬೆಂಕಿ ಹಚ್ಚಿಕೊಂಡು ತೀವ್ರ ಗಾಯಗೊಂಡಿದ್ದ ಯುವಕನನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಅಪಘಾತ ಹೆಚ್ಚಳ: ಸಚಿವ ಪರಮೇಶ್ವರ್ ಕಳವಳ
ಯಾತ್ರಾರ್ಥಿ ಮಹಿಳೆ ಆತ್ಮಹತ್ಯೆ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯೊಬ್ಬರು ಸಮೀಪದ ಕಾಡಿಗೆ ತೆರಳಿ ಅಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯದ ದೇವರಗದ್ದೆ ಬಳಿ ಗುರುವಾರ ಬೆಳಕಿಗೆ ಬಂದಿದೆ. ಮೂಲತಃ ಬೆಂಗಳೂರಿನ ನೆಲಮಂಗಲದ ಗಂಗಮ್ಮ ಲಕ್ಷ್ಮಮ್ಮ(60) ಮೃತ ಮಹಿಳೆ ಎಂದು ಗುರುತಿಸಲಾಗಿದೆ. 2-3 ದಿನಗಳ ಹಿಂದೆ ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಾರಣ ತಿಳಿದುಬಂದಿಲ್ಲ. ಸುಬ್ರಹ್ಮಣ್ಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅರಣ್ಯ ಗಸ್ತಿನಲ್ಲಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ ಮೃತದೇಹವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮೃತದೇಹದ ಬಳಿ ಇದ್ದ ಮೊಬೈಲ್ ಮೂಲಕ ಮನೆ ಅವರ ಪತ್ತೆ ಹಚ್ಚಿಲಾಗಿದೆ ಎಂದು ತಿಳಿದುಬಂದಿದೆ.
ಶಿವಮೊಗ್ಗ ಏರ್‌ಪೋರ್ಟ್ ವೆಚ್ಚದಲ್ಲಿ ಅಕ್ರಮ ನಡೆದಿದ್ದರೆ ಕ್ರಮ: ಎಂ.ಬಿ.ಪಾಟೀಲ್
ಆಸ್ಪತ್ರೆ ಶೌಚಾಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ: ಕಾಲಿಗೆ ಆಗಿದ್ದ ಗಾಯದ ನೋವು ತಾಳಲಾರದೆ ವ್ಯಕ್ತಿಯೊಬ್ಬರು ಶೌಚಾಲಯದ ಕಿಟಕಿಗೆ ಲುಂಗಿ ಬಿಗಿದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ನಗರದ ಮಂಗಳವಾರಪೇಟೆ ನಿವಾಸಿ ಹನುಮಂತಯ್ಯ(57) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಹನುಮಂತಯ್ಯನವರ ಕಾಲಿಗೆ ಗಾಯವಾಗಿದ್ದು, ಅವರನ್ನು ನಗರದ ಲಕ್ಷ್ಮೇದೇವಮ್ಮ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯದ ನೋವು ತಾಳಲಾರದೆ ಅವರು ಶುಕ್ರವಾರ ಬೆಳಗ್ಗೆ ಆಸ್ಪತ್ರೆಯ ಶೌಚಾಲಯದ ಕಿಟಿಕಿಗೆ ಲುಂಗಿ ಕಟ್ಟಿನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಾವಿನ ಕುರಿತು ಯಾವುದೇ ಅನುಮಾನವಿಲ್ಲ ಎಂದು ಅವರ ಪತ್ನಿ ನಗರದ ಪುರ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.