ಅಕ್ರಮ ದನ ಸಾಗಾಟದ ವಾಹನ ಡಿಕ್ಕಿಯಾಗಿ ವ್ಯಕ್ತಿ ಸಾವು ಆರೋಪ; ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

By Ravi Janekal  |  First Published Mar 30, 2024, 11:52 PM IST

ಅಕ್ರಮ ದನ ಸಾಗಾಟದ ವಾಹನ ಡಿಕ್ಕಿಯಾಗಿ ವ್ಯಕ್ತಿಯೋರ್ವ ದುರ್ಮರಣಕ್ಕೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ಧಾಳ ಎಂಬಲ್ಲಿ ನಡೆದಿದೆ. ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಸಾವು.


ದಕ್ಷಿಣ ಕನ್ನಡ (ಮಾ.30): ಅಕ್ರಮ ದನ ಸಾಗಾಟದ ವಾಹನ ಡಿಕ್ಕಿಯಾಗಿ ವ್ಯಕ್ತಿಯೋರ್ವ ದುರ್ಮರಣಕ್ಕೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ಧಾಳ ಎಂಬಲ್ಲಿ ನಡೆದಿದೆ.

ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಸಾವು. ವಿಠಲ ರೈ ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ  ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರು ವಿಠಲ ರೈಗೆ ಡಿಕ್ಕಿ ಹೊಡೆದು ಎಸ್ಕೇಪ್ ಆಗಿದೆ. ಡಿಕ್ಕಿ ಹೊಡೆದ ಬಳಿಕ ಕಾರನ್ನು ನಿಲ್ಲಿಸದೆ ಚಾಲಕ ಹೋಗಿದ್ದಾನೆ. ಕಾರನ್ನು ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿನ ದಿ.ರಶೀದ್ ಎಂಬವರ ಮನೆಯ ಮುಂಭಾಗದಲ್ಲಿ ನಿಲ್ಲಿಸಿ ಪರಾರಿಯಾಗಿರುವ ಆರೋಪಿ.  ದನವನ್ನು ಪಕ್ಕದ ತೋಟದಲ್ಲಿ ಕಟ್ಟಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ..

Tap to resize

Latest Videos

ಜರ್ಸಿ ತಳಿ ಉತ್ಪಾದನಾ ಘಟಕದ ಹುಲ್ಲುಗಾವಲಿಗೆ ಬೆಂಕಿ; ಹತ್ತಾರು ಎಕರೆ ಹಸಿ ಹುಲ್ಲು ಸುಟ್ಟು ಭಸ್ಮ!

ಅಕ್ರಮ ದನ ಸಾಗಾಟದ ಕಾರೊಂದು ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟ ಹಿನ್ನೆಲೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ‌ ಖಂಡಿಸಿ ಕಡಬ ಆಸ್ಪತ್ರೆಯ ಬಳಿ ಸ್ಥಳೀಯರ ಪ್ರತಿಭಟನೆ ನಡೆಸಿದರು. ತಕ್ಷಣ ದ.ಕ ಜಿಲ್ಲಾ ಎಸ್ಪಿ ಸ್ಥಳಕ್ಕೆ ಬರಬೇಕು ಅಂತ ಪ್ರತಿಭಟನಾಕಾರರ ಪಟ್ಟು ಹಿಡಿದರು. ಕಡಬ ಸರಕಾರಿ ಆಸ್ಪತ್ರೆಯ ಬಳಿ ಹಿಂದೂ ಸಂಘಟನೆಗಳಿಂದಲೂ ಪ್ರತಿಭಟನೆ ನಡೆದಿದೆ. ಸದ್ಯ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು.

click me!