
ತ್ಯಾಗರಾಜನಗರದ ನಿವಾಸಿ ಸುರೇಶ್ (45) ಕೊಲೆಯಾದ ದುರ್ದೈವಿ. ಈ ಹತ್ಯೆ ಸಂಬಂಧ ಮೃತನ ಸ್ನೇಹಿತರಾದ ವೇಲು, ಸ್ಟೀಫನ್ ಹಾಗೂ ಪ್ರದೀಪ್ ಬಂಧಿತರಾಗಿದ್ದಾರೆ.
ತ್ಯಾಗರಾಜನಗರದ ಬಳಿ ಆಟೋದಲ್ಲಿ ಗುರುವಾರ ರಾತ್ರಿ ಈ ನಾಲ್ವರು ಸ್ನೇಹಿತರು ಮದ್ಯ ಸೇವಿಸಿದ್ದಾರೆ. ಈ ವೇಳೆ ಮದ್ಯದ ಅಮಲಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿದೆ. ಆಗ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಕೆರಳಿದ ಆರೋಪಿಗಳು, ಸುರೇಶ್‌ಗೆ ಬಿಯರ್ ಬಾಟಲ್‌ನಿಂದ ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಣಕಾಸು ವಿಚಾರಕ್ಕೆ ಹತ್ಯೆ?
ತನ್ನ ಕುಟುಂಬದ ಜತೆ ನೆಲೆಸಿದ್ದ ಸುರೇಶ್, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ವೇಲು ಬಳಿ ಸ್ಟೀಫನ್ ಹಾಗೂ ಪ್ರದೀಪ್ ಕೆಲಸ ಮಾಡುತ್ತಿದ್ದರು. ಹಲವು ವರ್ಷಗಳಿಂದ ಸುರೇಶ್ ಹಾಗೂ ವೇಲು ಸ್ನೇಹಿತರಾಗಿದ್ದು, ಈ ಗೆಳೆತನದಲ್ಲಿ ಪರಸ್ಪರ ಹಣಕಾಸು ವ್ಯವಹಾರ ಇತ್ತು. ಮದ್ಯ ಸೇವಿಸಿದಾಗ ಗೆಳೆಯರ ಮಧ್ಯೆ ಹಣಕಾಸು ವಿಚಾರ ಪ್ರಸ್ತಾಪವಾಗಿದೆ. ಇದೇ ವಿಚಾರ ಕೊನೆಗೆ ಸುರೇಶ್ ಕೊಲೆಗೂ ಕಾರಣವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ