
ರಾಜಮಂಡ್ರಿ/ ಆಂಧ್ರ ಪ್ರದೇಶ, (ಆ.01): ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಸೊಸೆಯನ್ನೇ ಕೊಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಮಲ್ಕಿಪುರಂ ಮಂಡಲದ ಮೆಡಿಚೆರ್ಲಾ ಪಾಳ್ಯಂನಲ್ಲಿ ನಡೆದಿದೆ.
ಮೃತ ಸೊಸೆಯನ್ನು ಪ್ರಿಯಾಮಣಿ (25) ಎಂದು ಹಾಗೂ ಆರೋಪಿ ಮಾವನನ್ನು ಸತ್ಯನಾರಾಯಣ ಎಂದು ಗುರುತಿಸಲಾಗಿದೆ. ಪ್ರಿಯಾಮಣಿ, ಸತ್ಯನಾರಾಯಣ ಮಗ ವಿಜಯ್ ಕುಮಾರ್ನನ್ನು ಮದುವೆ ಆಗಿದ್ದಳು. ಆದ್ರೆ, ವಿಜಯ್ ಕತಾರ್ನಲ್ಲಿ ಕೆಲಸ ಮಾಡುತ್ತಿದ್ದಾನೆ.
ಕುಷ್ಟಗಿ: ಅನೈತಿಕ ಸಂಬಂಧ ಪ್ರಶ್ನಿಸಿದ ಪತ್ನಿಯನ್ನೇ ಕೊಂದ ಪಾಪಿ ಗಂಡ..!
ಇತ್ತ ಪ್ರಿಯಾಮಣಿ ಮತ್ತೊಬ್ಬ ಯುವಕನೊಂದಿಗೆ ಲವ್ವಿಡವ್ವಿ ಶುರುಮಾಡಿಕೊಮಡಿದ್ದಾಳೆ. ಈ ಹಿನ್ನೆಲೆಯಲ್ಲಿ ಮಾವ ಸತ್ಯನಾರಾಯಣ ಹಾಗೂ ಪ್ರಿಯಾಮಣಿ ಕುಟುಂಬದ ನಡುವೆ ಅನೇಕ ದಿನಗಳಿಂದಲೂ ಜಗಳ ನಡೆಯಿತ್ತಿತ್ತು.
ಕೊನೆಗೆ ಪ್ರಿಯಾಮಣಿ ಅಕ್ರಮ ಸಂಬಂಧ ಹೊಂದಿದ್ದ ಯುವಕನೊಂದಿಗೆ ಓಡಿ ಹೋಗಿದ್ದಾಳೆ ಎಂದು ಮಾವ ಜುಲೈ 22ರಂದು ಪೊಲೀಸರಿಗೆ ದೂರು ನೀಡಿದ್ದಾನೆ. ಪೊಲೀಸ್ ಮಧ್ಯಸ್ತಿಕೆಯಿಂದಾಗಿ ಪ್ರಿಯಾಮಣಿ ಮನೆಗೆ ಹಿಂತಿರುಗಿದ್ದಳು.ಬಳಿಕ ಸಂಧಾನ ಮಾಡಿ ಮನೆಗೆ ಕಳುಹಿಸಲಾಗಿತ್ತು.
ಎಲ್ಲವೂ ಸರಿಹೋಯಿತು ಅಂದುಕೊಳ್ಳುವಷ್ಟರಲ್ಲಿ ಪ್ರಿಯಾಮಣಿ ಮತ್ತು ಸತ್ಯನಾರಾಯಣನ ನಡುವೆ ಗಲಾಟೆ ನಡೆದಿದೆ. ಅದು ವಿಕೋಪಕ್ಕೆ ಹೋಗಿ ಸತ್ಯನಾರಾಯಣ ಪ್ರಿಯಾಮಣಿಯನ್ನು ತಾಯಿಯ ಮುಂದೆಯೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಸದ್ಯ ಸತ್ಯನಾರಾಯಣನನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ