
ಹಾಸನ (ಮಾ.23): ಹುಟ್ಟುತ್ತಾ ಅಣ್ಣ-ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಎಂಬ ಗಾದೆ ಮಾತು ಸುಳ್ಳಲ್ಲ, ವಾಸ್ತವ. ಮನೆ ಮುಂದಿನ ದಾರಿ ವಿಚಾರಕ್ಕೆ ದಾಯಾದಿಗಳ ನಡುವೆ ಗಲಾಟೆಯಾಗಿ ಕುಡಿದ ಮತ್ತಿನಲ್ಲಿ ದೊಡ್ಡಪ್ಪನನ್ನೇ ಕೊಂದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರಕರವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಮಲ್ಲೇಶ್ ಗೌಡ(65) ಕೊಲೆಯಾದ ವ್ಯಕ್ತಿ. ಸಂಬಂಧದಲ್ಲಿ ಅಣ್ಣನ ಮಗನಾಗಿರುವ ಪ್ರಕಾಶ್ ಕೊಲೆ ಮಾಡಿರುವ ಆರೋಪಿ. ತನ್ನ ಮನೆಗೆ ತೆರಳಲು ಮೃತ ಮಲ್ಲೇಶಗೌಡ ಮನೆ ಸಮೀಪವೇ ದಾರಿ ಬೇಕು ಎಂದು ಗಲಾಟೆ ಮಾಡಿದ್ದ ಪ್ರಕಾಶ್. ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಬಂದು ದೊಡ್ಡಪ್ಪನೊಂದಿಗೆ ಜಗಳ ಮಾಡಿದ್ದಾನೆ. ಮಾತಿಗೆ ಮಾತು ಬೆಳೆದು ಮಲ್ಲೇಶಗೌಡನ್ನ ಮರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ. ಇತ್ತ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಮಲ್ಲೇಶ್‌ಗೆ ಬೇಲೂರಿನ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಲ್ಲೇಶ್ ಗೌಡ ಮೃತಪಟ್ಟಿದ್ದಾರೆ. ಅರೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.
ರಾಯಚೂರು: ಅಕ್ರಮ ಸಂಬಂಧಕ್ಕೆ ಅಡ್ಡಿ; ಮದ್ಯದಲ್ಲಿ ನಿದ್ರೆ ಮಾತ್ರೆ ಬೆರೆಸಿ ಪತಿಯ ಹತ್ಯೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ