ಶಿವಮೊಗ್ಗ: ಮೀನು ಹಿಡಿಯಲು ಹೋದವ ನದಿಯಲ್ಲಿ ನಾಪತ್ತೆ!

By Ravi Janekal  |  First Published Jul 20, 2024, 12:30 PM IST

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೋರ್ವ ನದಿಯಲ್ಲಿ ಕಣ್ಮರೆಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಯಡಗೊಪ್ಪ-ಯಲವಾಟ ಗ್ರಾಮದಲ್ಲಿ ನಡೆದಿದೆ.


ಶಿವಮೊಗ್ಗ (ಜು.20): ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೋರ್ವ ನದಿಯಲ್ಲಿ ಕಣ್ಮರೆಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಯಡಗೊಪ್ಪ-ಯಲವಾಟ ಗ್ರಾಮದಲ್ಲಿ ನಡೆದಿದೆ.

ಉದ್ರಿ ವಡ್ಡಿಗೇರೆ ಗ್ರಾಮದ ಯಲ್ಲಪ್ಪ(45) ನಾಪತ್ತೆಯಾಗಿರುವ ವ್ಯಕ್ತಿ. ಇಂದು ತನ್ನ ಸಹೋದರನೊಂದಿಗೆ ಮೀನು ಹಿಡಿಯಲು ನದಿಗೆ ತೆರಳಿದ್ದ ಮೃತ ವ್ಯಕ್ತಿ. ಮೀನು ಹಿಡಿಯುವ ವೇಳೆ ನದಿಯ ನೀರಿನ ಸುಳಿಗೆ ಸಿಲುಕಿ ಮುಳುಗಿದ್ದಾನೆ. ಆದರೆ ಇದುವರೆಗೆ  ಮೃತವ್ಯಕ್ತಿ ಪತ್ತೆಯಾಗಿಲ್ಲ.

Tap to resize

Latest Videos

undefined

ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಬೆಳೆಸೋದಕ್ಕೆ ಅಣ್ತಮ್ಮ ಕಿತ್ತಾಟ; ಕೊಲೆಯಲ್ಲಿ ಅಂತ್ಯ!

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ ಮೃತದೇಹ ಪತ್ತೆ ಕಾರ್ಯಾಚರಣೆ  ನಡೆಸಿದ್ದಾರೆ. ಸ್ಥಳಕ್ಕೆ ತಹಸೀಲ್ದಾರ್ ಮಂಜುಳಾ ಹೆಗಡಾಳ್, ಪಿಎಸ್‌ಐ ನಾಗರಾಜ್, ತಾಪಂ ಇಒ ಡಾ ಪ್ರದೀಪ್ ಕುಮಾರ್ ಭೇಟಿ ನೀಡಿದ್ದಾರೆ. ಕಾರ್ಯಾಚರಣೆ ಮುಂದುವರಿದಿದ್ದು, ಇದುವರೆಗೆ ಮೃತದೇಹ ಪತ್ತೆಯಾಗಿಲ್ಲ. ಸೊರಬ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

click me!