ಹಾವು ಕಚ್ಚಿದ್ದು ಅರಿವಿಗೆ ಬಾರದೆ ವೈದ್ಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಕೇರಳ ಮೂಲದ ವಿದ್ಯಾರ್ಥಿ ಸಿದ್ಧಾರ್ಥ ವಿವಿ ಘಟಿಕೋತ್ಸವದಲ್ಲಿ ಪದವಿ ಪಡೆದ ವಿದ್ಯಾರ್ಥಿ.
ತುಮಕೂರು (ಡಿ.1): ಸಾಹೇ(ಸಿದ್ಧಾರ್ಥ ವಿವಿ) ವಿವಿ ಘಟಿಕೋತ್ಸವದಲ್ಲಿ ಪದವಿ ಪಡೆದ ವಿದ್ಯಾರ್ಥಿಯೊಬ್ಬ ಹಾವು ಕಚ್ಚಿ ಮೃತಪಟ್ಟ ದಾರುಣ ಘಟನೆ ನಗರದಲ್ಲಿ ನಡೆದಿದೆ. ಕೇರಳ ಮೂಲದ ಅದಿತ್ ಬಾಲಕೃಷ್ಣನ್ ಎಂಬ ವೈದ್ಯ ವಿದ್ಯಾರ್ಥಿ ಮೃತ ದುರ್ದೈವಿ. ಬುಧವಾರ ನಡೆದ ವಿವಿ ಘಟಿಕೋತ್ಸವದಲ್ಲಿ ಪದವಿ ಪಡೆದ ಬಳಿಕ ಪಾರ್ಕಿನಲ್ಲಿ ನಿಂತಿದ್ದ ವೇಳೆ ಹಾವು ಕಚ್ಚಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಈತನಿಗೆ ಹಾವು ಕಚ್ಚಿರುವುದು ಗಮನಕ್ಕೆ ಬಂದಿಲ್ಲ. ಮನೆಗೆ ಬಂದ ಕೂಡಲೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ.
ಮೃತ ವಿದ್ಯಾರ್ಥಿ ಶವವನ್ನು ಸಿದ್ದಾರ್ಥ ಮೆಡಿಕಲ್ ಕಾಲೇಜಿಗೆ ರವಾನಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
undefined
ಬೆಂಗಳೂರು ಶಾಕ್, ಪ್ರಿನ್ಸಿಪಾಲ್ ಚೇಂಬರ್‌ಗೆ ಕರೆಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕಳ
ಕೆರೆಯಲ್ಲಿ ಮುಳುಗಿ ಬಾಲಕ ಸಾವು
ಸ್ನೇಹಿತರೊಂದಿಗೆ ಆಟವಾಡುವ ಸಲುವಾಗಿ ಕೆರೆ ನೀರಿಗೆ ಇಳಿದಿದ್ದ ಬಾಲಕ ಮುಳುಗಿ ಸಾವಿಗೀಡಾದ ಘಟನೆ ತಾಲೂಕಿನ ಬನವಾಸಿ ಸಮೀಪದ ಹಾಡಲಗಿ ಗ್ರಾಮದ ಕನಕಾಪುರ ಕೆರೆಯಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಬನವಾಸಿಯ ನಾಗಶ್ರೀ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ರಾಮ್ ಕುಮಾರ್ ಮಧುಕೇಶ್ವರ ನಾಯ್ಕ್ ಮಧುರವಳ್ಳಿ ಮೃತ ಬಾಲಕ. ವಿಷಯ ತಿಳಿದ ಕೂಡಲೇ ಬನವಾಸಿ ಪಿಎಸ್ಐ ಚಂದ್ರಕಲಾ ಪತ್ತಾರ ನೇತೃತ್ವದ ಪೊಲೀಸರ ತಂಡ ಸ್ಥಳೀಯ ಗ್ರಾಮಸ್ಥರು ಫೈರ್ ಬ್ರಿಗೇಡ್ ತಂಡ ಹಾಗೂ ಶ್ರೀ ಮಾರಿಕಾಂಬಾ ಲೈಫ್ ಗಾರ್ಡ್ ಟೀಮ್, ಶಿರಸಿ ಗೋಪಾಲ್ ಗೌಡ ನೇತೃತ್ವದ ತಂಡ ಸತತ ಕಾರ್ಯಾಚರಣೆ ನಡೆಸಿದೆ. ರಾತ್ರಿ 8 ಗಂಟೆಗೆ ಕೆರೆಯಲ್ಲಿ ಮೃತ ದೇಹ ಪತ್ತೆ ಹಚ್ಚಿ ನೀರಿನಿಂದ ಮೇಲೆತ್ತಿದ್ದಾರೆ. ಬನವಾಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಆರ್‌ಎಸ್ ಜಲಾಶಯದ ಹಿನ್ನೀರಿನಲ್ಲಿ ಕಾರುಣ್ಯ ಟ್ರಸ್ಟ್‌ನ ಮೂವರು ಮುಳುಗಿ ಸಾವು!