ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ನಾಲ್ಕು ತಿಂಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಉಳ್ಳಾಲ (ಜ.2) : ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ನಾಲ್ಕು ತಿಂಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಹಮ್ಮದ್ ರಝೀನ್ ಬಂಧಿತ ಆರೋಪಿ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದವನಾಗಿರುವ ಆರೋಪಿ. 17 ವರ್ಷ ವಯಸ್ಸಿನ ಪರಿಶಿಷ್ಟ ಜಾತಿ(ಎಸ್ಸಿ)ಗೆ ಸೇರಿದ ಅಪ್ರಾಪ್ತ ಬಾಲಕಿ. ಮೂರು ವರ್ಷಗಳ ಹಿಂದೆಯೇ ಮೂಡಿಗೆರೆಯಲ್ಲಿ ಬಾಲಕಿಯ ಪರಿಚಯವಾಗಿದೆ. ತನ್ನ ಚಿಕ್ಕಮ್ಮ ಮತ್ತು ಅಜ್ಜಿಯ ಜೊತೆಗೆ ಮೂಡಿಗೆರೆಯಲ್ಲಿ ವಾಸವಾಗಿದ್ದ ಬಾಲಕಿ. ಪರಿಚಯವಾದ ಬಳಿಕ ಬಾಲಕಿಯ ಮೊಬೈಲ್ ನಂಬರ್ ಪಡೆದುಕೊಂಡಿದ್ದ ಆರೋಪಿ, ನಿರಂತರ ಸಂಪರ್ಕದಲ್ಲಿದ್ದ. ಆ ಬಳಿಕ ಮಂಗಳೂರಿಗೆ ಬಂದು ಬಾಡಿಗೆ ಮನೆ ಮಾಡಿಕೊಂಡು ಆಟೋ ಚಾಲಕನಾಗಿ ಕೆಲಸ ಶುರುಮಾಡಿದ್ದ ಆರೋಪಿ.
ಲೈಂಗಿಕ ದೌರ್ಜನ್ಯಕ್ಕೆ ಸೇಡು: 25 ವರ್ಷದ ಯುವಕನ ಇರಿದು ಕೊಂದ ಮೂವರು ಅಪ್ರಾಪ್ತರು
ಮದುವೆಯಾಗುವುದಾಗಿ ಬಾಲಕಿಯನ್ನು ಪುಸಲಾಯಿಸಿ ಮಂಗಳೂರಿಗೆ ಕರೆಸಿಕೊಂಡಿದ್ದ ಆರೋಪಿ. ಬಾಲಕಿ ವಿಚಾರದಲ್ಲಿ ನಿರ್ಲಕ್ಷ್ಯ ತಾಳಿದ್ದ ಪೋಷಕರು. ಇತ್ತ ರಝೀನ್ ವಂಚನೆಗೆ ಬಲಿಯಾಗಿ ಮಂಗಳೂರಿಗೆ ಬಂದಿದ್ದ ಬಾಲಕಿ. ಪಂಪ್ ವೆಲ್ ಹತ್ತಿರ ಇಳಿದ ಬಾಲಕಿಯನ್ನ ಅಟೋದಲ್ಲಿ ಕುಂಪಲದ ಬಾಡಿಗೆ ಮನೆಗೆ ಕರೆದುಕೊಂಡು ಹೋಗಿದ್ದ ರಝೀನ್. ಬಾಡಿಗೆ ಮನೆಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಲೈಂಗಿಕ ದೌರ್ಜನ್ಯ ನಡೆದು ನಾಲ್ಕು ತಿಂಗಳ ಬಳಿಕ ಬೆಳಕಿಗೆ ಬಂದ ಪ್ರಕರಣ.
13 ವರ್ಷದ ಬಾಲಕಿಗೆ ಹಾಟ್ ಎಂದಿದ್ದ 50 ವರ್ಷದ ವ್ಯಕ್ತಿಗೆ 3 ವರ್ಷ ಜೈಲು ಶಿಕ್ಷೆ!
ಸ್ಥಳೀಯರ ಮೂಲಕ ಮಾಹಿತಿ ತಿಳಿದು ವಿಚಾರಣೆಗೆ ಮುಂದಾದ ಪೊಲೀಸರು. ಬಾಲಕಿ ವಿಚಾರಣೆ ನಡೆಸಿ ವಶಕ್ಕೆ ಪಡೆದಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ. ಸದ್ಯ ಬಾಲಕಿ ಘಟನೆ ಬಗ್ಗೆ ಬಾಯ್ಬಿಟ್ಟಿದ್ದು, ಬಾಲಕಿ ಹೇಳಿಕೆ ಆಧರಿಸಿ ಆರೋಪಿ ರಜೀನ್ ವಶಕ್ಕೆ ಪಡೆದ ಉಳ್ಳಾಲ ಪೊಲೀಸರು. ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ ಪೊಲೀಸರು. ಅರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.