ಹೆತ್ತ ತಾಯಿಯೇ ತನ್ನ ಇಬ್ಬರು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ ಮುಳಬಾಗಿಲಿನ ಅಂಜನಾದ್ರಿ ಬೆಟ್ಟದ ತಪ್ಪಲಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಕೋಲಾರ (ಡಿ.08): ಹೆತ್ತ ತಾಯಿಯೇ ತನ್ನ ಇಬ್ಬರು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ ಮುಳಬಾಗಿಲಿನ ಅಂಜನಾದ್ರಿ ಬೆಟ್ಟದ ತಪ್ಪಲಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಆಂಧ್ರ ಪ್ರದೇಶದ ರಾಮಸಮುದ್ರದ ನಿವಾಸಿ ಜ್ಯೋತಿ ಎಂಬುವರು ತನ್ನ ಮಕ್ಕಳಾದ ಉದಯಶ್ರೀ (8) ಹಾಗೂ ಅಕ್ಷರ(6) ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ನಂತರ ತಾನೂ ಬೆಂಕಿ ಹಚ್ಚಿಕೊಂಡಿದ್ದಾರೆ. ಘಟನೆಯಲ್ಲಿ ಆರು ವರ್ಷದ ಹೆಣ್ಣು ಮಗು ಮೃತಪಟ್ಟಿದೆ.
ಮತ್ತೊಂದು ಮಗು ಹಾಗೂ ತಾಯಿ ಸುಟ್ಟಗಾಯಗಳಿಂದ ಸಾವು, ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಮುಳಬಾಗಿಲು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆತ್ತಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸಾಗಿಸಲಾಗಿದೆ. ಗಂಡ ಬಿಟ್ಟು ಹೋಗಿರೋದಕ್ಕೆ ಮನನೊಂದು ಜ್ಯೋತಿ ಗಂಡನಿಲ್ಲದೇ ಜೀವನ ಸಾಗಿಸೋದಕ್ಕೆ ಕಷ್ಟವಾಗುತ್ತೆ ಎಂದು ನಿರ್ಧರಿಸಿ, ಮೊದಲು ಮಕ್ಕಳನ್ನು ಸಾಯಿಸಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿ ಇಬ್ಬರು ಮಕ್ಕಳೊಂದಿಗೆ ಇಲ್ಲಿಗೆ ಆಗಮಿಸಿದ್ದಳು ಎನ್ನಲಾಗಿದೆ. ಸ್ಥಳಕ್ಕೆ ಮುಳಬಾಗಿಲು ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.
Dharwad: ಲಾಡ್ಜ್ನಲ್ಲಿ ಒಟ್ಟಿಗೆ ನೇಣಿಗೆ ಶರಣಾದ ಯುವಕ, ಯುವತಿ
ನೇಣು ಬಿಗಿದ ಸ್ಥಿತಿಯಲ್ಲಿ ಗ್ರಾಪಂ ಸದಸ್ಯನ ಶವ ಪತ್ತೆ: ಗ್ರಾಪಂ ಸದಸ್ಯನೋರ್ವನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಕೊಳ್ಳೇಗಾಲ ನಗರದ ಕರ್ನಾಟಕ ಲಾಡ್ಜ್ ನಲ್ಲಿ ಕಂಡು ಬಂದಿದ್ದು ಈ ಸಂಬಂಧ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರ ಗ್ರಾಮದ ಮಣಿಕಂಠನಾಯಕ(34) ಆತ್ಮಹತ್ಯೆ ಮಾಡಿಕೊಂಡಿರುವ ಗ್ರಾಪಂ ಸದಸ್ಯನಾಗಿದ್ದು, ಡಿ. 3ರಂದು ಲಾಡ್ಜ್ ನಲ್ಲಿ ಕೊಠಡಿ ಬಾಡಿಗೆ ಪಡೆದು ವಾಸ್ತವ್ಯ ಹೂಡಿದ್ದರು ಎನ್ನಲಾಗಿದೆ. ಮಣಿಕಂಠನಾಯಕ ಸೋಮವಾರ ತಡರಾತ್ರಿ ಲಾಡ್ಜ್ ನಲ್ಲಿ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಇದು ಅನುಮಾನಾಸ್ಪದ ಸಾವು ಎಂದು ಕುಟುಂಬ ಸದಸ್ಯರು ಶಂಕಿಸಿದ್ದು ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದು ಆತ್ಮಹತ್ಯೆಗೆ ಕಾರಣ ಏನು ಎಂಬುದರ ಕುರಿತು ತನಿಖೆ ಪ್ರಾರಂಭಿಸಿದ್ದಾರೆ.
ಪತ್ನಿ ಆತ್ಮಹತ್ಯೆ ಪ್ರಕರಣ, ಪತಿ ಬಂಧನ: ಮದ್ದೂರು: ಪಟ್ಟಣದ ಹೊಳೇ ಬೀದಿಯಲ್ಲಿ ಪತಿ ಪರಸ್ತ್ರಿಯೊಂದಿಗೆ ಹೊಂದಿದ್ದ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಬೇಸತ್ತು ತನ್ನ ಮೂವರು ಮಕ್ಕಳಿಗೆ ವಿಷಪ್ರಾಷನ ಮಾಡಿಸಿ ಹತ್ಯೆಗೈದು ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಉಸ್ನಾಕೌಸಲ್ ಪತಿ ಅಖಿಲ್ ಅಹಮದ್‌ನನ್ನು ಶುಕ್ರವಾರ ರಾತ್ರಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮೃತ ಉಸ್ನಾಕೌಸಲ್ ತಾಯಿ ಬೇಬಿಜಾನ್ ನೀಡಿದ ದೂರಿನನ್ವಯ ಪ್ರಕರಣ ದಾಖಲು ಮಾಡಿಕೊಂಡ ಮದ್ದೂರು ಪೊಲೀಸರು ಮೃತಳ ಗಂಡ ಅಖಿಲ್ ಅಹಮದನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.
ಶಾಲೆಗಳಲ್ಲಿ ಮಕ್ಕಳ ಅಪೌಷ್ಟಿಕತೆ, ರಕ್ತಹೀನತೆ ಪರೀಕ್ಷೆ ಮಾಡಿ: ಸಚಿವ ಸುಧಾಕರ್ ಸೂಚನೆ
ನಂತರ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ 2ನೇ ಅಪರ ನ್ಯಾಯಾಧೀಶ ಎಸ್.ಪಿ.ಕಿರಣ್ ಅವರ ಮುಂದೆ ಹಾಜರುಪಡಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಆರೋಪಿ ಅಖಿಲ್ ಅಹಮದ್ ಆತನ ತಾಯಿ ಮುಕ್ಬುಲ್ ಜಾನ್, ತಂದೆ ಖಲೀಲ್ ಅಹಮದ್, ಅಣ್ಣ ಬೀಜೆಲ್, ಸಂಬಂಧಿಕರಾದ ಪಾಲ್ಕಿನ್ ಹಾಗೂ ಸೈಯಿದಾ ಅವರುಗಳು ತಲೆ ಮರೆಸಿಕೊಂಡಿದ್ದಾರೆ. ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ನಿನ್ನೆ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡ ಉಸ್ನಾಕೌಸಲ್ ಹಾಗೂ ಮೂರು ಮಕ್ಕಳ ಶವಗಳನ್ನು ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ನೀಡಿದ ನಂತರ ತುಮಕೂರಿಗೆ ಕೊಂಡೊಯ್ದು ಅಂತ್ಯಕ್ರಿಯೆ ನೆರವೇರಿಸಲಾಯಿತು.