
ಮೈಸೂರು (ಮೇ.19): ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದ ದಂಪತಿ ಅನುಮಾನಸ್ಪಾದವಾಗಿ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಗೊಲ್ಲರ ಬೀದಿಯಲ್ಲಿ ನಡೆದಿದೆ.
ಪ್ರಕಾಶ್(51), ಪತ್ನಿ ಯಶೋದಾ(48) ಮೃತ ದಂಪತಿ. ಪಟ್ಟಣದ ಬಿಎಂ ರಸ್ತೆಯ ಪ್ರವಾಸಿ ಮಂದಿರದ ಬಳಿ ಕ್ಯಾಂಟೀನ್ ವ್ಯಾಪಾರ ನಡೆಸುತ್ತಿದ್ದ ಪ್ರಕಾಶ್, ಪತ್ನಿ ಸಹ ಚಿಲ್ಲರೆ ಅಂಗಡಿ, ಹಲ್ಲರ್ ಮಿಲ್ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದರು. ಗುರುವಾರ ರಾತ್ರಿ ಸಂಬಂಧಿಕರ ಮನೆಯಲ್ಲಿ ಊಟ ಮುಗಿಸಿ ಮನೆಗೆ ತೆರಳಿದ್ದ ದಂಪತಿ, ಶುಕ್ರವಾರ ಬೆಳಗ್ಗೆ ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮಗಳು ತನುಶ್ರೀ ಕರೆ ಮಾಡಿದಾಗ ಕರೆ ಸ್ವೀಕರಿಸಿಲ್ಲ. ರಾತ್ರಿವರೆಗೂ ಕರೆ ಮಾಡಿರುವ ಮಗಳು. ಕೊನೆಗೆ ಸಂಬಂಧಿಕರಿಗೆ ಫೋನ್ ಮೂಲಕ ಮನೆ ಬಳಿ ತೆರಳುವಂತೆ ತಿಳಿಸಿದ್ದಾಳೆ. ಸಂಬಂಧಿಕರು ಮನೆ ಬಳಿ ತೆರಳಿ ಕಿಟಕಿ ತೆರೆದು ನೋಡಿದಾಗ ದಂಪತಿಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಐಪಿಎಲ್ ಬೆಟ್ಟಿಂಗ್ ಸಾಲಕ್ಕೆ ತುತ್ತಾಗಿ ರಾಯಚೂರಿನ ಯುವಕ ಆತ್ಮಹತ್ಯೆ
ತಕ್ಷಣ ಪೊಲೀಸರಿಗೆ ಕರೆ ಮಾಡಿ ಮೃತಪಟ್ಟಿರುವ ವಿಷಯ ತಿಳಿಸಿದ ಸಂಬಂಧಿಕರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಘಟನೆ ಸಂಬಂಧ ಅನುಮಾನ ವ್ಯಕ್ತಪಡಿಸಿ ಮೃತ ದಂಪತಿ ಪುತ್ರಿ ತನುಶ್ರೀ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪಿರಿಯಾಪಟ್ಟಣ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ದಂಪತಿಗಳಿಗೆ ವಿಷ ಬೆರೆಸಿ ಕೊಲೆ ಮಾಡಲಾಗಿದೆಯೇ? ಅಥವಾ ಇನ್ನೇನಾದರೂ ಕಾರಣವಿದೆಯೇ ಎಂಬ ಬಗ್ಗೆ ತನಿಖೆ ಬಳಿಕ ಗೊತ್ತಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ