
ಬಾಗಲಕೋಟೆ (ನ.21): ಆಟವಾಡಲು ಬಂದ ಮಗುವಿನ ಮೇಲೆ ಬೀದಿನಾಯಿಯೊಂದು ದಾಳಿ ನಡೆಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಇಲಕಲ್ ಪಟ್ಟಣದ ವಿದ್ಯಾಗಿರಿಯಲ್ಲಿ ನಡೆದಿದೆ.
ಬೀದಿ ನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ನಾಲ್ಕು ವರ್ಷದ ಮಗು. ಕಣ್ಣು ಕುತ್ತಿಗೆ, ತಲೆ ಎಲ್ಲೆಂದರೆ ಕಚ್ಚಿರುವ ನಾಯಿ. ಸದ್ಯ ಗಾಯಾಳು ಮಗುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೀದಿ ನಾಯಿ ದಾಳಿ ಸಿಸಿಟಿವಿಯಲ್ಲಿ ಸೆರೆ:
ಮಗುವಿನ ಮೇಲೆ ಬೀದಿ ನಾಯಿ ದಾಳಿ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮನೆಯ ಮುಂದಿನ ಅಂಗಳದಲ್ಲಿ ಆಟವಾಡಲು ಇಳಿದಿರುವ ಮಗು. ಈ ವೇಳೆ ಅಲ್ಲೇ ಮಲಗಿದ್ದ ಬೀದಿನಾಯಿ. ಮಗು ಮೆಟ್ಟಿಲ ಮೇಲಿಂದ ಕೆಳಗೆ ಇಳಿಯುತ್ತಿದ್ದಂತೆ ದಾಳಿ ಮಾಡಿದ ನಾಯಿ. ಕೆಳಗೆ ಬಿದ್ದ ಮಗುವಿನ ಮೇಲೆ ಎಲ್ಲೆಂದರಲ್ಲೇ ಕಚ್ಚಿ ಗಾಯಗೊಳಿಸಿದೆ. ಅದೃಷ್ಟವಶಾತ್ ಅದೇ ವೇಳೆಗೆ ಮಗುವಿನ ಚೀರಾಟ ಕೇಳಿ ಹೊರಗೆ ಓಡಿ ಬಂದು ಮಗುವನ್ನು ಉಳಿಸಿಕೊಂಡಿದ್ದಾರೆ.
ಸುಳ್ವಾಡಿ ವಿಷ ಪ್ರಸಾದ ಪ್ರಕರಣ:ಇಮ್ಮಡಿ ಮಹದೇವಸ್ವಾಮಿ ಜಾಮೀನು ಅರ್ಜಿ ಮತ್ತೆ ವಜಾ! ಏನಿದು ಪ್ರಕರಣ?
ಸ್ಥಳೀಯರು ಆಕ್ರೋಶ:
ಪಟ್ಟಣದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಿದ್ದು, ಬೀದಿನಾಯಿಗಳ ನಿಯಂತ್ರಣಕ್ಕೆ ಹಲವು ಹೇಳಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ ಬೀದಿನಾಯಿ ದಾಳಿ ಮಾಡಿದ ಪ್ರಕರಣಗಳು ನಡೆದಿವೆ ಆದರೆ ಎಚ್ಚೆತ್ತುಕೊಳ್ಳದೇ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ ಸ್ಥಳೀಯರು ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ