ಚಲಿಸುತ್ತಿದ್ದ ಬಸ್‌ನಿಂದ ವಿದ್ಯಾರ್ಥಿ ಬಿದ್ದ ಪ್ರಕರಣ; ಚಿಕಿತ್ಸೆ ಫಲಿಸದೇ ಸಾವು!

By Ravi Janekal  |  First Published Jul 29, 2024, 7:47 PM IST

ಚಲಿಸುತ್ತಿದ್ದ ಬಸ್‌ನಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನಿಹಟ್ಟಿ ಪಿಎ ಗ್ರಾಮದಲ್ಲಿ ನಡೆದಿದೆ.


ವಿಜಯಪುರ (ಜು.29): ಚಲಿಸುತ್ತಿದ್ದ ಬಸ್‌ನಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನಿಹಟ್ಟಿ ಪಿಎ ಗ್ರಾಮದಲ್ಲಿ ನಡೆದಿದೆ.

ಸಂದೀಪ ಗಿಡ್ಡನಗೋಳ  (16) ಮೃತ ವಿದ್ಯಾರ್ಥಿ. ಸಿಂದಗಿ ಪಟ್ಟಣದ ಎಚ್ ಜಿ ಹೈಸ್ಕೂಲ್ ನ 10 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಮೃತ ವಿದ್ಯಾರ್ಥಿ. ಇಂದು ಬೆಳಗ್ಗೆ ನಡೆದಿದ್ದ ದುರ್ಘಟನೆ. ಚಲಿಸುತ್ತಿದ್ದ ಬಸ್‌ನಿಂದ ಕೆಳಗೆ ಬಿದ್ದು ಹಿಂಬದಿ ಚಕ್ರಕ್ಕೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ.ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯನ್ನ ಸಿಂದಗಿ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗ್ಗಿನಿಂದ ಚಿಕಿತ್ಸೆ ನೀಡುತ್ತಿದ್ದ ವೈದ್ಯರು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾನೆ.

Latest Videos

undefined

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಗೆ ಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ; ಅವ್ಯವಸ್ಥೆ ಕಂಡು ಗರಂ

ವಿದ್ಯಾರ್ಥಿ ಸಾವಿಗೆ ಚಾಲಕ, ನಿರ್ವಾಹಕರ ನಿರ್ಲಕ್ಷವೇ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗಿನಿಂದ ಗ್ರಾಮದ ರಸ್ತೆ ತಡೆದು ಪ್ರತಿಭಟನೆ ನಡೆಸಿ, ಚಾಲಕ, ನಿರ್ವಾಹಕನ ಮೇಲೆ ಕ್ರಮಕ್ಕೆ ಒತ್ತಾಯಿಸಿದ್ದರು. ಇದೀಗ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಸುದ್ದಿ ಕೇಳಿ ಬನ್ನಿಹಟ್ಟಿ ಗ್ರಾಮದಲ್ಲಿ ನೀರವ ಮೌನ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ಅಡ್ಡ ನಿಂತಿದ್ದ ಗಾಡಿ ತೆಗೆಯಿರಿ ಎಂದಿದ್ದಕ್ಕೆ 108 ಆಂಬುಲೆನ್ಸ್ ಚಾಲಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು!

ಶಕ್ತಿ ಯೋಜನೆ ಎಫೆಕ್ಟ್ ಆಯ್ತಾ?

ಶಕ್ತಿ ಯೋಜನೆ ಜಾರಿ ಬಳಿಕ ಸಾರಿಗೆ ಬಸ್‌ಗಳು ಮಹಿಳಾ ಪ್ರಯಾಣಿಕರಿಂದ ತುಂಬಿತುಳುಕುತ್ತಿವೆ. ಇದರಿಂದ ವಿದ್ಯಾರ್ಥಿಗಳು ಹಿಂದಿನಂತೆ ಬಸ್‌ನಲ್ಲಿ ಪ್ರಯಾಣಿಸಲು ಆಗುತ್ತಿಲ್ಲ. ಬಸ್‌ ಹಿಂಬದಿ ಡೂರ್‌ನಲ್ಲಿ ನಿಂತು ಅಪಾಯಕಾರಿ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಇದೆ. ಇತ್ತ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್ ಬಿಡುವಂತೆ ಒತ್ತಾಯಿಸಿದರೂ ಕೇರ್ ಮಾಡದ ಸಾರಿಗೆ ಇಲಾಖೆ. ಇದರಿಂದ ನೂಕುನುಗ್ಗಲಿನ ಬಸ್‌ನಲ್ಲಿ ವಿದ್ಯಾರ್ಥಿಗಳು ಪ್ರಯಾಣ ಮಾಡಿ ಅನ್ಯಾಯವಾಗಿ ದುರ್ಮರಣಕ್ಕೀಡಾಗುತ್ತಿದ್ದಾರೆ. ವಿದ್ಯಾರ್ಥಿಗಳ ಸಾವಿಗೆ ಹೊಣೆ ಯಾರು? ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಮೃತಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸುವಂತೆ ಆಗ್ರಹಿಸಿದ್ದಾರೆ.

click me!