ಕಾಲ ಕೆಟ್ಟೋಯ್ತು: ಬುದ್ದಿ ಹೇಳಿದ ಉಪನ್ಯಾಸಕನಿಗೆ ಲಾಂಗ್‌ ತೋರಿಸಿದ ವಿದ್ಯಾರ್ಥಿ!

Published : Aug 25, 2023, 09:02 AM ISTUpdated : Aug 25, 2023, 03:21 PM IST
ಕಾಲ ಕೆಟ್ಟೋಯ್ತು: ಬುದ್ದಿ ಹೇಳಿದ ಉಪನ್ಯಾಸಕನಿಗೆ ಲಾಂಗ್‌ ತೋರಿಸಿದ ವಿದ್ಯಾರ್ಥಿ!

ಸಾರಾಂಶ

ತರಗತಿಗೆ ಸರಿಯಾಗಿ ಹಾಜರಾಗುತ್ತಿಲ್ಲ ಎಂದು ಪೋಷಕರಿಗೆ ಮಾಹಿತಿ ನೀಡಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿಯೊಬ್ಬ ತನಗೆ ಪಾಠ ಹೇಳುತ್ತಿದ್ದ ಉಪನ್ಯಾಸಕರಿಗೆ ಲಾಂಗ್‌ ತೋರಿಸಿ ಬೆದರಿಕೆ ಹಾಕಿರುವ ಘಟನೆ ತಾಲೂಕಿನ ಬಿ.ಜಿ.ನಗರದ ಡಿಪ್ಲೊಮಾ ಕಾಲೇಜಿನಲ್ಲಿ ನಡೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ನಾಗಮಂಗಲ (ಆ.25): ತರಗತಿಗೆ ಸರಿಯಾಗಿ ಹಾಜರಾಗುತ್ತಿಲ್ಲ ಎಂದು ಪೋಷಕರಿಗೆ ಮಾಹಿತಿ ನೀಡಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿಯೊಬ್ಬ ತನಗೆ ಪಾಠ ಹೇಳುತ್ತಿದ್ದ ಉಪನ್ಯಾಸಕರಿಗೆ ಲಾಂಗ್‌ ತೋರಿಸಿ ಬೆದರಿಕೆ ಹಾಕಿರುವ ಘಟನೆ ತಾಲೂಕಿನ ಬಿ.ಜಿ.ನಗರದ ಡಿಪ್ಲೊಮಾ ಕಾಲೇಜಿನಲ್ಲಿ ನಡೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆ, ಕುಣಿಗಲ್‌ ತಾಲೂಕಿನ ಯಡಿಯೂರು ಹೋಬಳಿಯ ಅವರೇಗೆರೆ ಗ್ರಾಮದ ಪ್ರಥಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಯೇ ಕಾಲೇಜಿನ ಉಪನ್ಯಾಸಕ ಚಂದನ್‌ ಅವರಿಗೆ ಲಾಂಗ್‌ ತೋರಿಸಿ ಬೆದರಿಕೆ ಹಾಕಿದ್ದಾರೆ.

ವಿದ್ಯಾರ್ಥಿ ತರಗತಿಗೆ ಸರಿಯಾಗಿ ಬರುತ್ತಿಲ್ಲ, ಜೊತೆಗೆ ಆತನ ವರ್ತನೆಯೂ ಸರಿಯಿಲ್ಲ, ಪಾಠವನ್ನು ಸಹ ಸಮರ್ಪಕವಾಗಿ ಕಲಿಯುತ್ತಿಲ್ಲ. ಆದ್ದರಿಂದ ತಂದೆ ತಾಯಿಗಳಾದ ತಾವು ಆತನಿಗೆ ಬುದ್ಧಿ ಮಾತು ಹೇಳಿ, ಒಳ್ಳೆಯದನ್ನು ಕಲಿಯಲು ತಿಳಿಸಿ ಎಂದು ಪೋಷಕರಿಗೆ ಉಪನ್ಯಾಸಕ ಚಂದನ್‌ ದೂರು ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿ ಮರು ದಿನ ಬೈಕ್‌ನಲ್ಲಿ ಉಪನ್ಯಾಸಕರಿದ್ದ ಕೊಠಡಿಗೆ ಮಾಸ್‌್ಕ ಧರಿಸಿಕೊಂಡು ಆಗಮಿಸಿ ಲಾಂಗ್‌ ಹಿಡಿದು ನನ್ನ ವಿಚಾರಕ್ಕೆ ಬಂದರೇ ತಕ್ಕ ಪಾಠ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಇಸ್ರೋ ವಿಜ್ಞಾನಿಗಳ ಭೇಟಿಗೆ ಶನಿವಾರ ಬೆಂಗಳೂರಿಗೆ ಪ್ರಧಾನಿ ಮೋದಿ: 1 ಕಿಮೀ ರೋಡ್​ ಶೋ

ಈ ವೇಳೆ ಕೊಂಚ ವಿಚಲಿತರಾದ ಉಪನ್ಯಾಸಕರು ಘಟನೆಯನ್ನು ತಹಬದಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸಹ ಉಪನ್ಯಾಸಕರು ಸ್ಥಳೀಯ ಪೊಲೀಸರಿಗೆ ದೂರವಾಣಿ ಮೂಲಕ ವಿಚಾರ ತಿಳಿಸಿದರು, ತಕ್ಷಣವೇ ಕಾಲೇಜಿಗೆ ಆಗಮಿಸಿದ ಪೊಲೀಸರು ಆತನ ಕೈಯಲ್ಲಿದ್ದ ಲಾಂಗ್‌ ಮತ್ತು ಆತನ ಬೈಕ್‌ನ್ನು, ಆತನನ್ನೂ ವಶಕ್ಕೆ ಪಡೆದು ಅವರ ತಂದೆ ತಾಯಿಗಳಿಗೆ ವಿಚಾರ ಮುಟ್ಟಿಸಿದರು.

ಗೊಲ್ಲರಹಟ್ಟಿಯಲ್ಲಿ ಮರುಕಳಿಸಿದ ಮೌಢ್ಯಾಚರಣೆ: ಊರಿಂದ ಹೊರಗಿಟ್ಟಿದ್ದ ಬಾಣಂತಿ, ಹಸುಗೂಸು ರಕ್ಷಿಸಿದ ಜಡ್ಜ್‌

ಈ ಸಂಬಂಧ ಬೆಳ್ಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತದನಂತರ ಆತನನ್ನು ತಂದೆ ತಾಯಿಯವರ ಸಮ್ಮುಖದಲ್ಲಿ ಬುದ್ಧಿ ಮಾತು ಹೇಳಿ ಠಾಣೆಯಿಂದ ಕಳುಸಿಕೊಡಲಾಗಿದೆ. ಪೋಷಕರು ಮತ್ತು ಪೊಲೀಸರೆದುರು ತಾನು ಇನ್ನು ಮುಂದೆ ಇಂತಹ ತಪ್ಪನ್ನು ಮಾಡುವುದಿಲ್ಲ ಎಂದು ವಿದ್ಯಾರ್ಥಿ ಪ್ರತಿಜ್ಞೆ ಮಾಡಿದ್ದಾನೆಂದು ತಿಳಿದು ಬಂದಿದೆ. ವಿದ್ಯಾರ್ಥಿಯ ಈ ವರ್ತನೆಯಿಂದ ಇಡಿ ಕಾಲೇಜಿನಲ್ಲಿ ಆತಂಕ ಸೃಷ್ಟಿಯಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡ್ರಗ್ಸ್‌ ಸಪ್ಲೈಗೆ ಸ್ತ್ರೀಯರ ಬಳಕೆ ಅಧಿಕ! ಆಫ್ರಿಕಾ ಖಂಡದ ಸ್ತ್ರೀಯರೇ ಅಧಿಕ
ಗುಜರಾತ್‌ನಲ್ಲೊಂದು ನಿರ್ಭಯಾ ಪ್ರಕರಣ