ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಬೈಕ್​ಗೆ ಗುದ್ದಿ ಫ್ಲೈಓವರ್​ನಿಂದ ಕೆಳಗೆ ಬಿದ್ದ ಕಾರು!

By Govindaraj S  |  First Published Sep 3, 2024, 11:49 AM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕಾರು ಡಿವೈಡರ್​ಗೆ ಡಿಕ್ಕಿಯಾಗಿ ಮೇಲ್ಸೇತುವೆಯಿಂದ ಬಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಯಶವಂತಪುರ ಸರ್ಕಲ್​ನಲ್ಲಿ ಬೆಳಗಿನ ಜಾವ 3.45ರ ಸುಮಾರಿಗೆ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಬೆಂಗಳೂರು (ಸೆ.03): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕಾರು ಡಿವೈಡರ್​ಗೆ ಡಿಕ್ಕಿಯಾಗಿ ಮೇಲ್ಸೇತುವೆಯಿಂದ ಬಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಯಶವಂತಪುರ ಸರ್ಕಲ್​ನಲ್ಲಿ ಬೆಳಗಿನ ಜಾವ 3.45ರ ಸುಮಾರಿಗೆ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏನಿದು ಘಟನೆ?: ಮೇಕ್ರಿ ಸರ್ಕಲ್ ರಸ್ತೆಯಿಂದ ತುಮಕೂರು ರಸ್ತೆಗೆ ಸಂಚರಿಸುವಾಗ ಯಶವಂತಪುರ ಸರ್ಕಲ್ ಬಳಿ ಮುಂದೆ ಹೋಗುತ್ತಿದ್ದ ಬೈಕ್​ಗೆ ತಮಿಳುನಾಡು ರಿಜಿಸ್ಟ್ರೇಷನ್ ಹೊಂದಿರುವ ಕಾರು TN37DH9484 ಕಾರು ಡಿಕ್ಕಿ ಹೊಡೆದಿದೆ. ಬಳಿಕ‌ ರಸ್ತೆ ವಿಭಜಕಕ್ಕೆ ಗುದ್ದಿ ಮೇಲ್ಸೇತುವೆಯಿಂದ ಕೆಳಗೆ ಅಪ್ಪಳಿಸಿದೆ. ಬಿದ್ದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡರು. ಬೈಕ್‌ ಸವಾರನಿಗೂ ಗಾಯವಾಗಿದೆ. ಕಾರು ನಜ್ಜುಗುಜ್ಜಾಗಿದೆ.‌ 

Tap to resize

Latest Videos

ಹೇಗಿತ್ತು ಗೊತ್ತಾ ದರ್ಶನ್-ಸುದೀಪ್ ಗೆಳೆತನ?: ಕಿಚ್ಚನ ಅದೊಂದು ಮಾತು.. ಬೇರೆ ಕತೆ ಹೇಳಿತ್ತು!

ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದ್ಯ ಸೇವಿಸಿ ವೇಗವಾಗಿ ವಾಹನ ಚಾಲನೆ ಮಾಡಿರುವುದು ಘಟನೆಗೆ ಕಾರಣವೆಂದು ಮೇಲ್ನೋಟಕ್ಕೆ ಕಂಡುಬಂದಿದೆ. ಕಾರಿನಲ್ಲಿ ಮದ್ಯದ ಬಾಟಲಿಗಳು ದೊರೆತಿವೆ. ತಮಿಳುನಾಡು ನೋಂದಣಿ ಸಂಖ್ಯೆಯ ಕಾರು ಇದಾಗಿದೆ. ಯಶವಂತಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

click me!