ಬೆಂಗಳೂರು: ನೈಸ್ ರೋಡ್ ಬ್ರಿಡ್ಜ್ ಮೇಲಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಟ್ರಕ್!

Published : Feb 13, 2024, 12:18 AM IST
ಬೆಂಗಳೂರು: ನೈಸ್ ರೋಡ್ ಬ್ರಿಡ್ಜ್ ಮೇಲಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಟ್ರಕ್!

ಸಾರಾಂಶ

ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಬ್ರಿಡ್ಜ್‌ ಮೇಲಿಂದ ಕೆಳಗೆ ಬಿದ್ದ ಘಟನೆ ತಡರಾತ್ರಿ ಬೆಂಗಳೂರಿನ ನೈಸ್‌ ರಸ್ತೆಯ ಬೇಗೂರು-ಬೊಮ್ಮನಹಳ್ಳಿ ರಸ್ತೆಯಲ್ಲಿ ನಡೆದಿದೆ. ಲಾರಿ ಕೆಳಗೆ ಬಿದ್ದ ರಭಸಕ್ಕೆ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು. ಹುಳಿಮಾವು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.

ಬೆಂಗಳೂರು (ಫೆ.12): ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಬ್ರಿಡ್ಜ್‌ ಮೇಲಿಂದ ಕೆಳಗೆ ಬಿದ್ದ ಘಟನೆ ತಡರಾತ್ರಿ ಬೆಂಗಳೂರಿನ ನೈಸ್‌ ರಸ್ತೆಯ ಬೇಗೂರು-ಬೊಮ್ಮನಹಳ್ಳಿ ರಸ್ತೆಯಲ್ಲಿ ನಡೆದಿದೆ.

ಲಾರಿ ಕೆಳಗೆ ಬಿದ್ದ ರಭಸಕ್ಕೆ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು. ಕೆಳಗಡೆ ವಾಹನಗಳು ಸಂಚರಿಸುತ್ತಿದ್ದ ವೇಳೆ ಬ್ರಿಡ್ಜ್ ಮೇಲಿಂದ ಕೆಳಗೆ ಬಿದ್ದಿರುವ ಟ್ರಕ್ ಅದೃಷ್ಟವಶಾತ್ ಭಾರೀ ದುರಂತವೊಂದು ತಪ್ಪಿದೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಸ್ಥಳದಿಂದ ವಾಹನ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟ ಸಂಚಾರಿ ಪೊಲೀಸರು. ಹುಳಿಮಾವು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.

ಬಿಬಿಎಂಪಿ ಕಸದ ಲಾರಿಗೆ ವಾಹನ ಡಿಕ್ಕಿ; 14 ವರ್ಷದ ಬಾಲಕಿ ದುರ್ಮರಣ!

ಬೈಕ್ ಗೆ KSRTC ಬಸ್ ಡಿಕ್ಕಿ, ಸವಾರ ಸಾವು

ಬೆಂಗಳೂರು: ಯಶವಂತಪುರ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್‌ಆರ್‌ಟಿಸಿ) ಬಸ್‌, ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ 50 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ 10.30ರ ಸುಮಾರಿಗೆ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಜೇಂದ್ರ ಅವರು ಜಿಎಸ್‌ಟಿ ಕಚೇರಿಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಅನ್ಯೋನ್ಯವಾಗಿದ್ದ ಅಣ್ಣ ತಂಗಿಯ ಬದುಕು ಅಂತ್ಯ, ವ್ಯಾಟ್ಸ್ಆ್ಯಪ್ ಸ್ಟೇಟಸ್ ನೀಡಿತ್ತು ಸಾವಿನ ಸುಳಿವು!

ಪೊಲೀಸರ ಪ್ರಕಾರ, ಕೆಎಸ್‌ಆರ್‌ಟಿಸಿ ಬಸ್ ತುಮಕೂರು ಡಿಪೋದಿಂದ ಮೆಜೆಸ್ಟಿಕ್ ಕಡೆಗೆ ಹೋಗುತ್ತಿದ್ದಾಗ ಬೈಕ್‌ಗೆ ಗುದ್ದಿದ ಪರಿಣಾಮ, ಸವಾರ ವಾಹನದ ಕೆಳಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಾಗೊಂಡಿದ್ದ ರಾಜೇಂದ್ರ ಅವರನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ನಾವು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಚಾಲಕನನ್ನು ಬಂಧಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!