
ಕಾರವಾರ, (ಮೇ.23): ಕಲ್ಗಾ (ಚಿಪ್ಪು) ತೆಗೆಯಲು ಹೋಗಿದ್ದ ಮಹಿಳೆ ಕಾಲು ಜಾರಿ ಬಿದ್ದು ನದಿ ಪಾಲಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಗೋಕರ್ಣದ ಹೊಸ್ಕಟ್ಟಾ ತೊರೆಗಜನಿ ಬಳಿ ನಡೆದಿದೆ.
ದೇವಕಿ ಶಂಕರ ಹರಿಕಂತ್ರ (40) ಸಾವನ್ನಪ್ಪಿದ ಮಹಿಳೆ. ಅಘನಾಶಿನಿ ನದಿಯಿಂದ ಕಲ್ಗಾ (ಚಿಪ್ಪು) ತೆಗೆದು ಮಾರಾಟ ಮಾಡಿ ಜೀವನ ಸಾಗಿಸ್ತಿದ್ದ ಮಹಿಳೆ, ನಿನ್ನೆ (ಭಾನುವಾರ) ಸಂಜೆ ನದಿಗೆ ಕಲ್ಗಾ ತೆಗೆಲು ಹೋಗಿದ್ದಾಳೆ. ಆದ್ರೆ, ಮಹಿಳೆ ರಾತ್ರಿಯಾದರೂ ಹಿಂತಿರುಗಿರಲಿಲ್ಲ.
ಇದರಿಂದ ಹುಡುಕಾಟ ನಡೆಸಿದಾಗ ಮಹಿಳೆ ಮೃತದೇಹ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಗೋಕರ್ಣ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಳಿಸಿಕೊಂಡಿದ್ದಾರೆ.
6 ತಿಂಗಳ ನಂತರ ಕುಣಿಗಲ್ ಕಾಡಿನಲ್ಲಿ ಪತ್ತೆಯಾದ ಅಸ್ಥಿಪಂಜರ ಹಿಂದೆ ದುರಂತ ಪ್ರೇಮದ ಕಥೆ
ಕಾಂಗ್ರೆಸ್ ಮುಖಂಡ ದುರ್ಮರಣ
ಭೀಕರ ಅಪಘಾತದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ನಿಲ್ಕುಂದ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಘಟಕ ಅಧ್ಯಕ್ಷರಾಗಿದ್ದ ಮಂಜುನಾಥ ಬಿ. ಗೌಡ ಕಬ್ಬಿನ್ಮನೆ ಮೃತಪಟ್ಟಿದ್ದಾರೆ.
ಮದುವೆ ದಿಬ್ಬಣದ ಜನರನ್ನು ಕರೆದೊಯ್ಯುತ್ತಿದ್ದ ವಾಹನ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ.
ಘಟನೆಯಲ್ಲಿ 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮದುವೆ ಮುಗಿಸಿ ದಿಬ್ಬಣದ ಜನರು ಕಾರಿನಲ್ಲಿ ತೆರಳುತ್ತಿದ್ದರು. ಎದುರುಗಡೆ ಬರುತ್ತಿದ್ದ ಕಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ