ರಸ್ತೆ ಪಕ್ಕ ನಿಂತ ಯುವತಿಗೆ ಅನ್ಯಕೋಮಿನ ಯುವಕರಿಂದ ಹಾಡಹಗಲೇ ಕಿರುಕುಳ! ಏನಾಗ್ತಿದೆ ಬೆಂಗಳೂರಲ್ಲಿ?

Published : May 10, 2024, 11:26 PM ISTUpdated : May 10, 2024, 11:41 PM IST
ರಸ್ತೆ ಪಕ್ಕ ನಿಂತ ಯುವತಿಗೆ ಅನ್ಯಕೋಮಿನ ಯುವಕರಿಂದ ಹಾಡಹಗಲೇ ಕಿರುಕುಳ! ಏನಾಗ್ತಿದೆ ಬೆಂಗಳೂರಲ್ಲಿ?

ಸಾರಾಂಶ

ಸಿಲಿಕಾನ್ ಬೆಂಗಳೂರಿನಲ್ಲಿ ಪುಂಡರ ಹಾವಳಿ ಮೀತಿಮೀರಿದೆ. ದಿನನಿತ್ಯ ಹಲ್ಲೆ, ದರೋಡೆ ಮಹಿಳೆಯರಿಗೆ ಹಾಡುಹಗಲೇ ಕಿರುಕುಳದಂತಹ ಪ್ರಕರಣಗಳು ಹೆಚ್ಚುತ್ತಲೇ ಇವೆ. ಯುವತಿಯರು ಹಗಲಲ್ಲೇ ಹೊರಗೆ ಓಡಾಡದಂತೆ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಮತ್ತೊಂದು ಪ್ರಕರಣ ನಡೆದಿದೆ.

ಬೆಂಗಳೂರು (ಮೇ.10): ಸಿಲಿಕಾನ್ ಬೆಂಗಳೂರಿನಲ್ಲಿ ಪುಂಡರ ಹಾವಳಿ ಮೀತಿಮೀರಿದೆ. ದಿನನಿತ್ಯ ಹಲ್ಲೆ, ದರೋಡೆ ಮಹಿಳೆಯರಿಗೆ ಹಾಡುಹಗಲೇ ಕಿರುಕುಳದಂತಹ ಪ್ರಕರಣಗಳು ಹೆಚ್ಚುತ್ತಲೇ ಇವೆ. ಯುವತಿಯರು ಹಗಲಲ್ಲೇ ಹೊರಗೆ ಓಡಾಡದಂತೆ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಮತ್ತೊಂದು ಪ್ರಕರಣ ನಗರದಲ್ಲಿ ನಡೆದಿದೆ. 

ರಸ್ತೆಯ ಪಕ್ಕ ನಿಂತಿದ್ದ ಯುವತಿಗೆ ಇಬ್ಬರು ಮುಸ್ಲಿಂ ಯುವಕರು ಅವಾಚ್ಯವಾಗಿ ನಿಂದಿಸಿ ಕಿರುಕುಳ ನೀಡಿದ ಘಟನೆ ನಗರದಲ್ಲಿ ನಡೆದಿದೆ. ಬಿಟಿಎಂ ಲೇಔಟ್‌ನಲ್ಲಿ ನಡೆದಿದೆ ಎನ್ನಲಾದ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನಗರ ಪೊಲೀಸರು ಏನು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತ್ಯೇಕ ರಸ್ತೆ ಅಪಘಾತ ; ಬೈಕ್ ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ ಗಾಯ

ವಿಡಿಯೋದಲ್ಲಿ ಏನಿದೆ?

ರಸ್ತೆಯ ಪಕ್ಕ ಸ್ಕೂಟಿ ನಿಲ್ಲಿಸಿ ನಿಂತಿರುವ ಯುವತಿ. ಅಲ್ಲಿಗೆ ಬಂದ ಇಬ್ಬರು ಮುಸ್ಲಿಂ ಯುವಕರು ಯುವತಿಯ ಬಳಿ ಸ್ಕೂಟಿ ನಿಲ್ಲಿಸಿಕೊಂಡು, 'ಕುಡಿದ ನಶೆಯಲ್ಲಿ ರೋಡ್ ಶೋ ಮಾಡುತ್ತೀಯಾ?' ಎಂದು ಬೈದಿದ್ದಾರೆ. ಯುವಕರ ಅವಾಚ್ಯ ನಿಂದನೆಯಿಂದ ಗಾಬರಿಗೊಳಗಾದ ಯುವತಿ. ಯುವಕರಿಗೆ ಪ್ರಶ್ನಿಸಿದ್ದಾಳೆ. ಇದಕ್ಕೆ ಯುವಕರು ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾರೆ. ಕೆಲಕಾಲ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದು ವಿಡಿಯೋದಲ್ಲಿ ದಾಖಲಾಗಿಗದೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್. ನೆಟ್ಟಿಗರು ಹಿಗ್ಗಾಮುಗ್ಗಾಟ ತರಾಟೆಗೆ ತೆಗೆದುಕೊಂಡಿದ್ದಾರೆ. 

Breaking: ಬಿಜೆಪಿ ನಾಯಕ, ವಕೀಲ ದೇವರಾಜೇಗೌಡ ವಶಕ್ಕೆ

ಬೆಂಗಳೂರಲ್ಲಿ ಹಾಡಹಗಲೇ ಈ ರೀತಿ ಯುವತಿಯರಿಗೆ ಕಿರುಕುಳ ನೀಡಲಾಗುತ್ತಿದೆ. ಪುಂಡರಿಗೆ ಪೊಲೀಸರ ಭಯ ಇಲ್ಲದಂತಾಗಿದೆ. ಪುಂಡಪೋಕರಿಗಳನ್ನ ಬೆಂಡೆತ್ತುತ್ತೇವೆ ಎಂದು ಪೊಲೀಸರು ಗುಡುಗಿದ್ದಷ್ಟೇ ಬಂತು, ವಾಸ್ತವಾಗಿ ಪೊಲೀಸರ ಕಣ್ಮುಂದೆಯೇ ಇಂತಹ ಘಟನೆಗಳು ನಗರದಲ್ಲಿ ರಾಜಾರೋಷವಾಗಿ ನಡೆಯುತ್ತಿವೆ. ಕೆಲ ಮುಸ್ಲಿಂ ಯುವಕರಿಗೆ ಪೊಲೀಸರ ಭಯವೇ ಇಲ್ಲದಂತಾಗಿದೆ. ಕಿರುಕುಳಕ್ಕೆ ಒಳಗಾದವರು ದೂರು ನೀಡಲು ಹೋದರೆ ಪೋಲಿಸರು ದೂರು ದಾಖಲಿಸಿಕೊಳ್ಳುವುದಿಲ್ಲ ಎಂದು ಕೆಲ ನೆಟ್ಟಿಗರು ಆರೋಪ ಮಾಡಿದ್ದಾರೆ. ಅದಕ್ಕೆ ಇಂಬು ಕೊಡುವಂತೆ ಕೆಲ ಘಟನೆಗಳನ್ನು ತಿಳಿಸಿದ್ದಾರೆ. ಸದ್ಯ ಯುವತಿಗೆ ನಿಂದಿಸಿದ ಪ್ರಕರಣ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಪೊಲೀಸರು ಸ್ವಯಂಪ್ರೇರಿತ ದೂರು ದಾಖಲು ಮಾಡಿ ಪುಂಡರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿರುವ ನೆಟ್ಟಿಗರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?