ಸಿಗರೇಟ್ ಸೇದುವ ವಿಚಾರಕ್ಕೆ ಯುವಕನೋರ್ವನ ನಡುರಸ್ತೆಗೆ ಕೆಡವಿ ಸ್ನೇಹಿತರೇ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ ಘಟನೆ ಕಾಡುಗೋಡಿಯ ಬೆಳ್ತಾರು ಕಾಲೋನಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಕಾಡುಗೋಡಿ (ಜೂ.8): ಸಿಗರೇಟ್ ಸೇದುವ ವಿಚಾರಕ್ಕೆ ಯುವಕನೋರ್ವನ ನಡುರಸ್ತೆಗೆ ಕೆಡವಿ ಸ್ನೇಹಿತರೇ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ ಘಟನೆ ಕಾಡುಗೋಡಿಯ ಬೆಳ್ತಾರು ಕಾಲೋನಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಧನಂಜಯ್, ಹಲ್ಲೆಗೊಳಗಾದ ಯುವಕ. ವಿಶಾಲ್, ಆಕಾಶ್, ಸಂತೋಶ್, ಸುರೆಂದರ್, ಅಂಬರೀಶ್, ಕಿರಣ್ ಹಲ್ಲೆ ನಡೆಸಿದ ಕಿರಾತಕರು. ಹಲ್ಲೆ ಮಾಡಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬಳಿಕ ಪ್ರಕರಣ ದಾಖಲಿಸಿಕೊಂಡ ಕಾಡುಗೋಡಿ ಪೊಲೀಸರು ವಿಡಿಯೋ ದೃಶ್ಯ ಆಧರಿಸಿ ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ.
Bengaluru: ಕಿಟಕಿಯ ಗ್ರಿಲ್ ಕತ್ತರಿಸಿ ಮನೆ ಕಳ್ಳತನ ಮಾಡುತ್ತಿದ್ದವರ ಬಂಧನ!
ಧನಂಜಯ್ ಹಾಗೂ ಹಲ್ಲೆ ಮಾಡಿದ ಸ್ನೇಹಿತರು ಹೋಟೆಲ್ಲೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸಿಗರೇಟು ಸೇದುವ ವಿಚಾರಕ್ಕೆ ಜಗಳ ಶುರುವಾಗಿದೆ. ಈ ವೇಳೆ ಯುವಕನನ್ನು ಮನಬಂದಂತೆ ಥಳಿಸಿದ್ದಾರೆ. ಘಟನೆ ಬಳಿಕ ಹೋಟೆಲ್ ಮಾಲೀಕ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹಲ್ಲೆ ನಡೆದ ಸ್ಥಳದ ಸಿಸಿಟಿವಿ ಪರಿಶೀಲಿಸಿದಾಗ ಘಟನೆಯಲ್ಲಿ ಭಾಗಿಯಾದವರ ಗುರುತು ಪತ್ತೆ ಹಚ್ಚಿ ಬಂಧಿಸಿರುವ ಪೊಲೀಸರು . ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿಚಾರಣೆ ಮುಂದುವರಿಸಿದ್ದಾರೆ.