ಚಲಿಸುತ್ತಿದ್ದ ರೈಲಿಗೆ ಬಿದ್ದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ವಿಜಯಪುರ ನಗರದ ಇಬ್ರಾಹಿಂಪುರ ಬಳಿಯ ರೈಲ್ವೆ ಹಳಿಯಲ್ಲಿ ಘಟನೆ ನಡೆದಿದೆ.
ವಿಜಯಪುರ (ಮಾ.22): ಚಲಿಸುತ್ತಿದ್ದ ರೈಲಿಗೆ ಬಿದ್ದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ವಿಜಯಪುರ ನಗರದ ಇಬ್ರಾಹಿಂಪುರ ಬಳಿಯ ರೈಲ್ವೆ ಹಳಿಯಲ್ಲಿ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನ ಗುರುತು, ವಿಳಾಸ ಪತ್ತೆಯಾಗಿಲ್ಲ. ಡಿಕ್ಕಿಯಾದ ರಭಸಕ್ಕೆ ಯುವಕನ ದೇಹ ತುಂಡುತುಂಡಾಗಿ ಬಿದ್ದಿದೆ. ಯುವಕ ಯಾರು? ಯಾಕೆ ಆತ್ಮಹತ್ಯೆ ಮಾಡಿಕೊಂಡ ಎಂಬ ಬಗ್ಗೆ ನಿಖರವಾಗಿ ಕಾರಣ ಗೊತ್ತಾಗಿಲ್ಲ.
ಘಟನೆ ಬಳಿಕ ರೈಲ್ವೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ತುಂಡು ತುಂಡಾಗಿದ್ದ ಯುವಕನ ದೇಹದ ಭಾಗಗಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ಹಾಕಿ ಮರಣೋತ್ತರ ಪರೀಕ್ಷೆಗೆ ಕಳಿಸಿದ ಪೊಲೀಸರು. ವಿಜಯಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು: ಯಮ ರೂಪದಲ್ಲಿ ಬಂದ ಕೇಬಲ್ ವೈರ್; ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ದುರ್ಮರಣ!