
ಚಿಕ್ಕಬಳ್ಳಾಪುರ (ಸೆ.8): ಪ್ರೇಯಸಿ ತನ್ನ ಮೊಬೈಲ್ ನಂಬರ್ ಅನ್ನು ಬ್ಲಾಕ್ ಮಾಡಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಡೆತ್‌ನೋಟ್ ಬರೆದಿಟ್ಟು ಆತ್ಮ೧ಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಪೆರೆಸಂದ್ರ ಕ್ರಾಸ್‌ನ ಕಾಲೇಜ್‌ವೊಂದರ ಹಾಸ್ಟೆಲ್‌ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೇರಳದ ವಯನಾಡು ಮೂಲದ ಮೊಹಮ್ಮದ್ ಶಬ್ಬೀರ್ (26) ಎಂದು ಗುರುತಿಸಲಾಗಿದೆ.
ಶಾಂತ ಗ್ರೂಫ್ ಆಪ್ ಇನ್‌ಸ್ಟಿಟ್ಯೂಟ್ ಕಾಲೇಜಿನ ಅಲೈಡ್ ಸೈನ್ಸ್ ಕೋರ್ಸ್‌ನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಶಬ್ಬೀರ್, ಭಾನುವಾರ ಬೆಳಗ್ಗೆ ತನ್ನ ಹಾಸ್ಟೆಲ್ ರೂಮ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ರೂಮಿನ ಕಿಟಕಿಗೆ ಪಂಚೆ ಕಟ್ಟಿ, ಅದನ್ನು ಕತ್ತಿಗೆ ಬಿಗಿದುಕೊಂಡು ಆತ್ಮ೧ಹತ್ಯೆ ಮಾಡಿಕೊಂಡಿದ್ದಾನೆ. ಡೆತ್ ನೋಟ್ ಪತ್ತೆಯಾಗಿದ್ದು, ‘ಐ ಡಿಡ್ ನಾಟ್ ಸ್ಟಾಪ್ ಎನಿಥಿಂಗ್ ಅನ್ ಟಿಲ್, ಐ ಆಲ್ ವೇಸ್ ಲವ್ ಫಾರ್ ಎವೆರ್, ಅತಿಥಿ ಯೂ ಆರ್ ಮೈ ಫಸ್ಟ್ ಆ್ಯಂಡ್ ಯೂ ಆರ್ ಮೈ ಲಾಸ್ಟ್’ ಎಂದು ಬರೆಯಲಾಗಿದೆ.
ಮೃತ ಶಬ್ಬೀರ್ ತನ್ನ ಸಹಪಾಠಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆಕೆ ಕಳೆದ ಕೆಲವು ದಿನಗಳಿಂದ ಶಬ್ಬೀರ್‌ನ ದೂರವಾಣಿ ಸಂಖ್ಯೆಯನ್ನು ಬ್ಲಾಕ್ ಮಾಡಿದ್ದು, ಸರಿಯಾಗಿ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಶಬ್ಬೀರ್ ಮನನೊಂದಿದ್ದ ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ