ಸ್ನೇಹಿತರ ಜೊತೆ ಪಾರ್ಟಿಗೆ ಹೋಗುವುದಾಗಿ ಹೇಳಿ ಹೋಗಿದ್ದ ಯುವಕ ನಿಗೂಢವಾಗಿ ನಾಪತ್ತೆಯಾಗಿದ್ದ. ಮೂರು ದಿನಗಳ ಬಳಿಕ ಹೊಲದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮಿಟ್ಟಿ ಕ್ಯಾಂಪ್ ಗ್ರಾಮದಲ್ಲಿ ನಡೆದಿದೆ.
ರಾಯಚೂರು (ಫೆ.29): ಸ್ನೇಹಿತರ ಜೊತೆ ಪಾರ್ಟಿಗೆ ಹೋಗುವುದಾಗಿ ಹೇಳಿ ಹೋಗಿದ್ದ ಯುವಕ ನಿಗೂಢವಾಗಿ ನಾಪತ್ತೆಯಾಗಿದ್ದ. ಮೂರು ದಿನಗಳ ಬಳಿಕ ಹೊಲದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮಿಟ್ಟಿ ಕ್ಯಾಂಪ್ ಗ್ರಾಮದಲ್ಲಿ ನಡೆದಿದೆ.
ಸುರೇಶ್ ನಾಯಕ್ (20) ಶವವಾಗಿ ಪತ್ತೆಯಾಗಿರೋ ಯುವಕ. ಪೆಟ್ರೋಲ್ ಸುರಿದು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಮೃತದೇಹ. ಪರಿಚಿತರೇ ಕೊಲೆ ಮಾಡಿರುವ ಶಂಕೆ. ಕೊಲೆಗೆ ಕಾರಣವೇನು ಎಂಬುದು ತಿಳಿದುಬಂದಿಲ್ಲ.
ಆರ್ಮಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ!
ಬೆಂಗಳೂರಲ್ಲಿ ಮೇಸ್ತ್ರಿ ಕೆಲಸ ಮಾಡಿಕೊಂಡು ಬೆಂಗಳೂರಿನಲ್ಲೇ ಇದ್ದ ಮೃತ ಯುವಕ. ಆದರೆ ಇತ್ತೀಚೆಗೆ ಊರಲ್ಲಿ ಜಾತ್ರೆಯ ಇದೆಯೆಂದು ಬೆಂಗಳೂರಿನಿಂದ ಊರಿಗೆ ಮರಳಿದ್ದ. ಸ್ನೇಹಿತರ ಜೊತೆ ಪಾರ್ಟಿ ಇದೆ ಎಂದು ಮನೆಯಲ್ಲಿ ಹೇಳಿ ಹೊರಹೋಗಿದ್ದ ಯುವಕ ಮನೆಗೆ ಬಾರದೆ ಬಳಿಕ ನಿಗೂಢವಾಗಿ ನಾಪತ್ತೆಯಾಗಿದ್ದ. ಕುಟುಂಬಸ್ಥರು ಸುತ್ತಮುತ್ತ ಹುಡುಕಾಡಿದರೂ ಎಲ್ಲೂ ಪತ್ತೆಯಾಗಿರಲಿಲ್ಲ. ಆದರೆ ಮೂರು ದಿನಗಳ ಬಳಿಕ ಇಂದು ಹೊಲದಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮಗನ ಮೃತದೇಹ ನೋಡಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಮಾನ್ವಿ ಪಟ್ಟಣ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಹತ್ಯೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು. ಪಾರ್ಟಿ ನೆಪದಲ್ಲಿ ಕರೆದುಕೊಂಡು ಹೋಗಿ ಸ್ನೇಹಿತರೇ ಕೊಲೆ ಮಾಡಿದ್ರಾ? ಹಳೇ ವೈಷಮ್ಯ, ಹಣಕಾಸಿನ ವಿಚಾರಕ್ಕೆ ಕೊಲೆ ನಡೆಯಿತಾ ಎಲ್ಲ ಆಯಾಮದಲ್ಲೂ ತನಿಖೆಗೆ ಮುಂದಾದ ಪೊಲೀಸರು.