ಕಲಬುರಗಿ: ಜಾತಿನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕ ಆತ್ಮಹತ್ಯೆ!

By Ravi Janekal  |  First Published May 2, 2024, 10:36 AM IST

ಜಾತಿ ನಿಂದನೆ ಕೇಸ್‌ ದಾಖಲಿಸಿದ್ದಕ್ಕೆ ಹೆದರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ ನಡೆದಿದೆ.


ಕಲಬುರಗಿ (ಮೇ.2): ಜಾತಿ ನಿಂದನೆ ಕೇಸ್‌ ದಾಖಲಿಸಿದ್ದಕ್ಕೆ ಹೆದರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ ನಡೆದಿದೆ.

ನಿಖಿಲ್ ಪೂಜಾರಿ(23) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ಲಾಡಮುಗಳಿ ಗ್ರಾಮದ ಹೊರ ವಲಯದ ಜಮೀನಿನಲ್ಲಿ ನೇಣಿಗೆ ಶರಣಾಗಿರುವ ಯುವಕ.

Tap to resize

Latest Videos

ಕಳೆದ ನಾಲ್ಕು ದಿನಗಳ ಹಿಂದೆ ಲಾಡಮುಗಳಿ ಗ್ರಾಮದಲ್ಲಿ ಜಾತ್ರೆ ನಡೆದಿತ್ತು. ಜಾತ್ರೆ ವೇಳೆ ಎರಡು ಸಮುದಾಯಗಳ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿತ್ತು. ಗಲಾಟೆ ಬಳಿಕ ಊರವರ ಸಮ್ಮುಖದಲ್ಲಿ ರಾಜೀ ಸಂಧಾನ ಕೂಡ ಮಾಡಲಾಗಿತ್ತು. ಆದರೆ ರಾಜೀ ಸಂಧಾನ ಬಳಿಕವೂ ನಿಖಿಲ್ ಪೂಜಾರಿ ಸೇರಿ ಹಲವರ ವಿರುದ್ಧ ನರೋಣಾ ಪೊಲೀಸ್ ಠಾಣೆಗೆ ದೂರು ನೀಡಿದ್ದ ಇನ್ನೊಂದು ಗುಂಪು. ನಿಖಿಲ್ ಸೇರಿ ಹಲವರ ವಿರುದ್ದ ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಜಾತಿ ನಿಂದನೆ ಕೇಸ್ ದಾಖಲಾಗಿದ್ದಕ್ಕೆ ಹೆದರಿಕೊಂಡಿದ್ದ ಯುವಕ ನಿಖಿಲ್ ಪೂಜಾರಿ ಗ್ರಾಮದ ಹೊರವಲಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 

ಗದಗ: ಪಿಎಸ್‌ಐ ಮೇಲೆಯೇ ಹಲ್ಲೆಗೆ ಮುಂದಾಗಿದ್ದ ಕೊಲೆ ಆರೋಪಿಗೆ ಪೊಲೀಸರಿಂದ ಗುಂಡೇಟು!

click me!