ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಚಕ್ರದ ಕೆಳಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಬೆಚ್ಚಿಬೀಳಿಸುವ ಘಟನೆ ವಿಜಯಪುರ ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿ ನಡೆದಿದೆ. ಮೃತ ಯುವಕ ಹಾಸನ ಮೂಲದವರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಗಾಂಧಿಚೌಕ್ ಪೊಲೀಸರು ಆಗಮಿಸಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಹೆಸರು, ವಿಳಾಸ ಪತ್ತೆ ಹಚ್ಚುತ್ತಿರುವ ಪೊಲೀಸರು.
ವಿಜಯಪುರ (ಜ.9): ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಚಕ್ರದ ಕೆಳಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಬೆಚ್ಚಿಬೀಳಿಸುವ ಘಟನೆ ವಿಜಯಪುರ ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿ ನಡೆದಿದೆ.
ಮೃತ ಯುವಕ ಹಾಸನ ಮೂಲದವರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಗಾಂಧಿಚೌಕ್ ಪೊಲೀಸರು ಆಗಮಿಸಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಹೆಸರು, ವಿಳಾಸ ಪತ್ತೆ ಹಚ್ಚುತ್ತಿರುವ ಪೊಲೀಸರು.
ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಸರ್ಕಾರಿ ಬಸ್ ಸಮೀಪಕ್ಕೆ ಬರುತ್ತಿದ್ದ ಮೊಬೈಲ್ ಎಸೆದು ಚಕ್ರದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಸಿಸಿಟಿವಿಯಲ್ಲಿ ಕಾಣಿಸಿದೆ. ಚಕ್ರದ ಕೆಳಗೆ ಸಿಲುಕಿ ರಕ್ತಸಿಕ್ತವಾಗ್ತಿದ್ದಂತೆ ಬೆಚ್ಚಿಬಿದ್ದ ಸ್ಥಳೀಯರು. ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿರುವ ಯುವಕ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೊಬೈಲ್ ಮೂಲಕ ಯುವಕನ ಪೋಷಕರ ಪತ್ತೆ ಹಚ್ಚುತ್ತಿರುವ ಪೊಲೀಸರು.