* ಬಂಧಿತನಿಂದ 12 ದ್ವಿಚಕ್ರ ವಾಹನ ವಶ
* ಕೆಂಗೇರಿ ಪೊಲೀಸರ ಕಾರ್ಯಾಚರಣೆ
* ಅಂತಾರಾಜ್ಯ ಪೆಡ್ಲರ್ಸ್ ಸೆರೆ: 15 ಕೇಜಿ ಗಾಂಜಾ ಜಪ್ತಿ
ಬೆಂಗಳೂರು(ಫೆ.23): ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು(Bike) ಕಳವು ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ಕೆಂಗೇರಿ ಠಾಣೆ ಪೊಲೀಸರು(Police) ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ(Chikaballapur) ಜಿಲ್ಲೆಯ ಚಿಂತಾಮಣಿ ಮೂಲದ ವೆಂಕಟಸ್ವಾಮಿ(38) ಬಂಧಿತ. ಆರೋಪಿ(Accused) ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ 6.7 ಲಕ್ಷ ರು. ಮೌಲ್ಯದ 12 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಯು ಇತ್ತೀಚೆಗೆ ಕೆಂಗೇರಿ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನದಲ್ಲಿ ಅನುಮಾನಾಸ್ಪದವಾಗಿ ಓಡಾಡುವಾಗ ಪೊಲೀಸರು ಗಮನಿಸಿ, ವಶಕ್ಕೆ ಪಡೆದು ಪ್ರಶ್ನಿಸಿದಾಗ ದುಷ್ಕೃತ್ಯಗಳು ಬೆಳಕಿಗೆ ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಯು ರಾತ್ರಿ ವೇಳೆ ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ(Theft). ಬಳಿಕ ಆಂಧ್ರಗಡಿ ಭಾಗಗಳಲ್ಲಿ ಗಿರಾಕಿಗಳನ್ನು ಹುಡುಕಿ 5-10 ಸಾವಿರ ರು.ಗೆ ದ್ವಿಚಕ್ರ ವಾಹನ ಮಾರಾಟ ಮಾಡಿ ಬಂದ ಹಣದಿಂದ ಮೋಜು-ಮಸ್ತಿ ಮಾಡಿ ವ್ಯಯಿಸುತ್ತಿದ್ದ. ಆರೋಪಿಯ ವಿರುದ್ಧ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 70ಕ್ಕೂ ಅಧಿಕ ಕಳವು ಪ್ರಕರಣ ದಾಖಲಾಗಿವೆ. ಹಲವು ಪ್ರಕರಣಗಳಲ್ಲಿ ಜೈಲು ಸೇರಿದ್ದ ಆರೋಪಿಯು ಜಾಮೀನು ಪಡೆದು ಹೊರಬಂದ ಬಳಿಕವೂ ಕಳವು ಕೃತ್ಯಗಳನ್ನು ಮುಂದುವರಿಸಿದ್ದ ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Battery Theft: ಸಿಗ್ನಲ್‌ಗಳ ಬ್ಯಾಟರಿ ಕದಿಯುತ್ತಿದ್ದ ಚಾಲಾಕಿ ದಂಪತಿ ಸೆರೆ
ಆರೋಪಿ ವೆಂಕಟಸ್ವಾಮಿ ಬಂಧನದಿಂದ ಕೆಂಗೇರಿ, ಬ್ಯಾಟರಾಯನಪುರ, ಕೆ.ಆರ್.ಪುರ, ಸಂಪಿಗೆಹಳ್ಳಿ, ಯಲಹಂಕ, ಹೆಣ್ಣೂರು, ಕಾಡುಗೋಡಿ ಮತ್ತು ಜ್ಞಾನಭಾರತಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾಗಿದ್ದ 12 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಂತಾರಾಜ್ಯ ಪೆಡ್ಲರ್ಸ್ ಸೆರೆ: 15 ಕೇಜಿ ಗಾಂಜಾ ಜಪ್ತಿ
ಬೆಂಗಳೂರು: ಅಕ್ರಮವಾಗಿ ಗಾಂಜಾ(Marijuana) ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಅಂತಾರಾಜ್ಯ ಪೆಡ್ಲರ್‌ಗಳನ್ನು ಶ್ರೀರಾಮಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ(Arrest).
ತ್ರಿಪುರ ಮೂಲದ ಜಾವೇದ್ ಹುಸೇನ್(23), ಮೌಸಿನ್ ಮಿಯಾ(23) ಹಾಗೂ ಅಬ್ದುಲ್ ಅಲಂಗಿರ್(22) ಬಂಧಿತರು. ಆರೋಪಿಗಳಿಂದ 15 ಕೆ.ಜಿ. ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಫೆ.19ರಂದು ಬೆಳಗ್ಗೆ 10.30ರ ಸುಮಾರಿಗೆ ಮೂವರು ದ್ವಿಚಕ್ರ ವಾಹನದಲ್ಲಿ ಗಾಂಜಾ ಇರಿಸಿಕೊಂಡು ಮಾರಾಟಕ್ಕೆ ತೆರಳುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಶ್ರೀರಾಮಪುರದ ಬ್ರಿಟಾನಿಯಾ ಫ್ಯಾಕ್ಟರಿ ಬಳಿ ಮಾಲು ಸಹಿತ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Bengaluru Crime: ಪ್ರಿಯಾಂಕ್ ಖರ್ಗೆ ಪತ್ನಿ ಮೊಬೈಲ್ ಕದ್ದಿದ್ದವರ ಸೆರೆ
ತ್ರಿಪುರ ಮೂಲದ ಆರೋಪಿಗಳು ನಗರದಲ್ಲಿ ಸೆಕ್ಯೂರಿಟಿ ಗಾರ್ಡ್(Security Guard) ಕೆಲಸ ಮಾಡಿಕೊಂಡಿದ್ದಾರೆ. ಆರೋಪಿಗಳು ಸುಲಭವಾಗಿ ಹಣ ಸಂಪಾದಿಸುವ ಉದ್ದೇಶದಿಂದ ಡ್ರಗ್ಸ್ ಪೆಡ್ಲಿಂಗ್ ದಂಧೆಗೆ ಇಳಿದಿದ್ದರು. ತವರು ರಾಜ್ಯ ತ್ರಿಪುರಕ್ಕೆ ಹೋದಾಗ ಕಡಿಮೆ ದರಕ್ಕೆ ಗಾಂಜಾ ಖರೀದಿಸಿ ಬಳಿಕ ಅದನ್ನು ನಗರದಲ್ಲಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಯಾರಿಗೂ ಅನುಮಾನಬಾರದಂತೆ ಲಗೇಜ್ ಬ್ಯಾಗ್‌ನಲ್ಲಿ ಗಾಂಜಾ ಇರಿಸಿ ರೈಲಿನ ಮೂಲಕ ನಗರಕ್ಕೆ ತರುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೇರಳದಿಂದ 2.2 ಕೆಜಿ ಗಾಂಜಾ ಸಾಗಾಟ: ಇಬ್ಬರ ಬಂಧನ
ಮಂಗಳೂರು: ಕೇರಳದ ಕುಂಜತ್ತೂರು ಪರಿಸರದಿಂದ ಮಂಗಳೂರಿಗೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಿ ನಗರದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಸಹಿತ 2.2 ಕೆಜಿ ಗಾಂಜಾವನ್ನು ನಗರ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಹೊಸಂಗಡಿ ಮಜಿಬೈಲ್ ನಿವಾಸಿ ಪ್ರಫುಲ್ ರಾಜ್ (23) ಮತ್ತು ಬಂಟ್ವಾಳ ಬೊಳಿಯಾರು ಅವಿನಾಶ್ (24) ಬಂಧಿತರು.