
ಬೆಂಗಳೂರು(ಅ.24): ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ಸಮೀಪ ಹಾಡಹಗಲೇ ಸಾರ್ವಜನಿಕರನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಬೆನ್ನಲ್ಲೇ ಆರೋಪಿಯೊಬ್ಬನನ್ನು ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಜಾದ್‌ನಗರ ಜಾನಿ ನಿವಾಸಿ (22) ಬಂಧಿತ. ಮತ್ತೊಬ್ಬ ಆರೋಪಿ ಬಗ್ಗೆ ಸುಳಿವು ಪತ್ತೆಯಾಗಿದ್ದು, ಶೀಘ್ರ ಬಂಧಿಸಲಾಗುವುದು ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಎಂ.ಪಾಟೀಲ್ ಹೇಳಿದ್ದಾರೆ.
ಆರೋಪಿಯಿಂದ 100 ಗ್ರಾಂ ತೂಕದ ಗಾಂಜಾ, ಡ್ರ್ಯಾಗರ್ ಹಾಗೂ ಒಂದು ಮಚ್ಚು ಜಪ್ತಿ ಮಾಡಲಾಗಿದೆ. ಆರೋಪಿ ಜಾನಿ ಕಳೆದ ವರ್ಷ ಬ್ಯಾಟರಾಯನಪುರದಲ್ಲಿ ಚಾಕು ತೋರಿಸಿ ಚಿನ್ನದ ಸರ ಕಸಿದಿದ್ದ ಪ್ರಕರಣದಲ್ಲಿ ಜೈಲು ಸೇರಿದ್ದ. ನಾಲ್ಕು ತಿಂಗಳು ಜೈಲಿನಲ್ಲಿದ್ದ ಆರೋಪಿ ಮಾರ್ಚ್‌ನಲ್ಲಿ ಬಿಡುಗಡೆ ಹೊಂದಿದ್ದ.
ಪತ್ನಿಯೊಂದಿಗೆ ಸಲುಗೆ ಬೇಡ ಎಂದಿದ್ದಕ್ಕೆ ಸಿಲಿಂಡರ್ ಎತ್ತಿಹಾಕಿ ಹತ್ಯೆಗೈದ ಗೆಳೆಯ..!
ಆರೋಪಿ ಕೂಲಿ ಕೆಲಸ ಮಾಡಿಕೊಂಡಿದ್ದು, ಪುನಃ ಮತ್ತೆ ಹಳೇ ಚಾಳಿ ಮುಂದುವರೆಸಿದ್ದ. ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ಇಬ್ಬರು ಆರೋಪಿಗಳು ದಾರಿಹೋಕನೊಬ್ಬನನ್ನು ಅಡ್ಡಹಾಕಿ ಚಾಕುವಿನಿಂದ ಬೆದರಿಸಿ ಸುಲಿಗೆ ಮಾಡಿದ್ದರು. ಈ ಸುಲಿಗೆ ಮಾಡುವ ವಿಡಿಯೊವನ್ನು ಲಾರಿ ಚಾಲಕನೊಬ್ಬ ಸೆರೆ ಹಿಡಿದಿದ್ದು, ಎಲ್ಲೆಡೆ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಡಿಸಿಪಿ ಅವರು ಆರೋಪಿಗಳ ಬಂಧನಕ್ಕೆ ತಂಡ ರಚಿಸಿದ್ದರು. ಇನ್ನೊಬ್ಬ ಆರೋಪಿ ಬಗ್ಗೆ ಮಾಹಿತಿ ಸಿಕ್ಕಿದ್ದು, ಶೀಘ್ರವೇ ಬಂಧಿಸಲಾಗುವುದು ಎಂದು ಡಿಸಿಪಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ