ಹಗಲು ಹೋಟೆಲಲ್ಲಿ ಕ್ಲೀನಿಂಗ್‌, ರಾತ್ರಿ ಮನೆಗಳ್ಳತನ ಮಾಡುತ್ತಿದ್ದ..!

Published : May 31, 2022, 06:12 AM IST
ಹಗಲು ಹೋಟೆಲಲ್ಲಿ ಕ್ಲೀನಿಂಗ್‌, ರಾತ್ರಿ ಮನೆಗಳ್ಳತನ ಮಾಡುತ್ತಿದ್ದ..!

ಸಾರಾಂಶ

*  18 ಲಕ್ಷ ಮೌಲ್ಯದ ಚಿನ್ನಾಭರಣ ವಶ *  18 ವರ್ಷದ ಹಿಂದೆಯೇ ಪೋಷಕರು ಮೃತ *  ದುಶ್ಚಟಗಳಿಗೆ ದಾಸಾಗಿದ್ದ ಕಳ್ಳ ಸಾದಿಕ್‌  

ಬೆಂಗಳೂರು(ಮೇ.31): ಹಗಲು ಹೊತ್ತಿನಲ್ಲಿ ಹೋಟೆಲ್‌ಗಳಲ್ಲಿ ಸ್ವಚ್ಛತಾ ಕೆಲಸ ಮಾಡಿಕೊಂಡು ರಾತ್ರಿ ವೇಳೆ ಮನೆಗಳವು ಮಾಡುತ್ತಿದ್ದ ಕಳ್ಳನನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿದ್ದಾರೆ.

ಸಿಟಿ ಮಾರ್ಕೆಟ್‌ನ ನಂದಿನಿ ಹೋಟೆಲ್‌ ನಿವಾಸಿ ಮೊಹಮದ್‌ ಸಾದಿಕ್‌ (31) ಬಂಧಿತ. ಈತನಿಂದ 330 ಗ್ರಾಂ ತೂಕದ ಚಿನ್ನಾಭರಣಗಳು, 2 ಕೆ.ಜಿ. 619 ಗ್ರಾಂ ತೂಕದ ಬೆಳ್ಳಿ ಸಾಮಾಗ್ರಿಗಳು, ಎರಡು ಮೊಬೈಲ್‌ ಫೋನ್‌ಗಳು ಸೇರಿದಂತೆ ಸುಮಾರು .18 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ ಶುಕ್ರವಾರ ಟಾಟಾ ಸಿಲ್‌್ಕ ಫಾರಂ, 1ನೇ ಅಡ್ಡರಸ್ತೆಯ ದಿವ್ಯ ರಿಜೆನ್ಸಿ ಅಪಾರ್ಚ್‌ಮೆಂಟ್‌ನ ರಾಮಚಂದ್ರ ಕೌಲಗಿ ಎಂಬುವವರ ಫ್ಲ್ಯಾಟ್‌ನಲ್ಲಿ ದುಷ್ಕರ್ಮಿಗಳು ಕಿಟಕಿ ಮೂಲಕ ಕೈ ಹಾಕಿ ಬಾಗಿಲ ಲಾಕ್‌ ತೆಗೆದು ಒಳ ಪ್ರವೇಶಿಸಿ ಬೀರುವಿನಲ್ಲಿದ್ದ ಚಿನ್ನ ಹಾಗೂ ಬೆಳ್ಳಿ ಆಭರಣಗಳು ಹಾಗೂ ಮೊಬೈಲ್‌ ಕಳವು ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Bengaluru Crime: ಹೋಟೆಲಲ್ಲಿ ತರಕಾರಿ ಹಚ್ಚುವ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ..!

ಬೆಳಗ್ಗೆ ಹೋಟೆಲ್‌ನಲ್ಲಿ ಕೆಲಸ

ಮಂಗಳೂರಿನ ಕಂಕನಾಡಿ ಮೂಲದ ಆರೋಪಿ ಸಾದಿಕ್‌ ಅವಿದ್ಯಾವಂತ. 18 ವರ್ಷದ ಹಿಂದೆ ಪೋಷಕರು ಮೃತರಾಗಿದ್ದಾರೆ. ಕೆಲ ವರ್ಷಗಳ ಹಿಂದೆ ಕೆಲಸ ಅರಸಿ ಬೆಂಗಳೂರಿಗೆ ಬಂದು ಸಿಟಿ ಮಾರುಕಟ್ಟೆಯ ನಂದಿನಿ ಹೋಟೆಲ್‌ನಲ್ಲಿ ಕ್ಲೀನಿಂಗ್‌ ಕೆಲಸಕ್ಕೆ ಸೇರಿಕೊಂಡಿದ್ದ. ದುಶ್ಚಟಗಳ ದಾಸನಾಗಿದ್ದು, ರಾತ್ರಿ ವೇಳೆ ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳವು ಮಾಡುತ್ತಿದ್ದ ಎಂದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿ ಸಾದಿಕ್‌ ಈ ಹಿಂದೆ ಕುಮಾರಸ್ವಾಮಿ ಲೇಔಟ್‌, ಕೆ.ಆರ್‌.ಮಾರುಕಟ್ಟೆ, ಬನಶಂಕರಿ ಹಾಗೂ ಬಸವನಗುಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಕಳವು ಮಾಡಿ ಜೈಲು ಸೇರಿದ್ದ. ಜಾಮೀನಿನ ಮೇಲೆ ಹೊರಬಂದ ಬಳಿಕ ಮನೆಗಳವು ಕೃತ್ಯಗಳನ್ನು ಮುಂದುವರಿಸಿದ್ದ ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು