
ಬೆಂಗಳೂರು(ಸೆ.18): ಮನೆಗಳ ಬೀಗ ಮುರಿದು ಕಳವು ಮಾಡುತ್ತಿದ್ದ ಕಳ್ಳನನ್ನು ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿ ಚಿನ್ನಾಭರಣ ಸೇರಿದಂತೆ ಮೂರು ಕಾರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿ ಬನ್ನೇರುಘಟ್ಟ ರಸ್ತೆಯ ಬಸವನಪುರದದ ತೌಹಿದ್(20) ಎಂಬಾತನಿಂದ 300 ಗ್ರಾಂ ಚಿನ್ನಾಭರಣ, 100 ಗ್ರಾಂ ತೂಕದ ಬೆಳ್ಳಿ ಸಾಮಗ್ರಿ ಹಾಗೂ ಕೃತ್ಯಕ್ಕೆ ಬಳಸಿದ್ದ ಮೂರು ಕಾರು ಹಾಗೂ ಕಬ್ಬಿಣದ ರಾಡ್‌ಗಳನ್ನು ಜಪ್ತಿ ಮಾಡಲಾಗಿದೆ.
ಕಳೆದ ಜೂನ್ 10ರಂದು ವಿಶ್ವೇಶ್ವರಯ್ಯ ಲೇಔಟ್‌ನ 9ನೇ ಬ್ಲಾಕ್‌ನ ಮನೆಯೊಂದರ ಮನೆಯ ಬಾಗಿಲಿನ ಬೀಗ ಮೀಟಿ ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Bengaluru Crime News: ಮೋಜು ಮಸ್ತಿಗಾಗಿ ಬೈಕ್ ಕದಿಯುತ್ತಿದ್ದ ಗ್ಯಾಂಗ್ ಬಂಧನ
ಈತನ ವಿರುದ್ಧ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿ ಮನೆಗಳವು ಪ್ರಕರಣ ದಾಖಲಾಗಿವೆ. ಹಲವು ಪ್ರಕರಣಗಳಲ್ಲಿ ಜೈಲು ಸೇರಿದ್ದ ಆರೋಪಿ ಜಾಮೀನು ಪಡೆದು ಹೊರಬಂದ ಬಳಿಕವೂ ಮನೆಗಳವು ಚಾಳಿ ಮುಂದುವರಿಸಿದ್ದ. ಆರೋಪಿ ಸ್ನೇಹಿತರಿಂದ ಕಾರನ್ನು ಬಾಡಿಗೆಗೆ ಪಡೆದು ಸುತ್ತಾಡಿ ಬೀಗ ಹಾಕಿದ ಮನೆಗಳನ್ನು ಗುರುತಿಸಿ ನಂತರ ಕಬ್ಬಿಣದ ರಾಡ್ ಬಳಸಿ ಬೀಗ ಮುರಿದು ಕಳ್ಳತನ ಮಾಡುತ್ತಿದ್ದನು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ