ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಬರೆದು ಕಾಮೆಂಟ್ ಮಾಡಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರು(ಆ.04): ಹಿಂದೂ ದೇವರ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲವಾಗಿ ಕಮೆಂಟ್ ಹಾಕಿದ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಸೆನ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಿಕರ್ನಕಟ್ಟೆ ಮಸೀದಿ ಹಿಲ್‌ರೋಡ್ ನಿವಾಸಿ ಮೊಹಮ್ಮದ್ ಸಲ್ಮಾನ್ (22) ಬಂಧಿತ ಆರೋಪಿ.
ಈತ ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಬರೆದು ಕಾಮೆಂಟ್ ಮಾಡಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ತಲಪಾಡಿ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ಆರೋಪಿ ಮುವಾದ್ ಬಂಧನ
ನಗರ ಪೊಲೀಸ್ ಕಮಿಷನರ್ ಕುಲದೀಪ್ ಆರ್. ಜೈನ್ ಅವರ ಮಾರ್ಗದರ್ಶನದಂತೆ ನಗರ ಸೆನ್ ಕ್ರೈಂ ಪೊಲೀಸ್ ಠಾಣಾ ಇನ್‌ಸ್ಪೆಕ್ಟರ್ ಸತೀಶ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.