ಕೆಲ ವರ್ಷಗಳ ಹಿಂದೆ ಶಾರದಮ್ಮಳನ್ನು ಪ್ರೀತಿಸಿ ಮದುವೆಯಾಗಿದ್ದ ಕಿಷ್ಟಪ್ಪ ಪತ್ನಿಯು ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಆಕೆ ಶೀಲ ಶಂಕಿಸುತ್ತಿದ್ದನು. ಅದೇ ಸಿಟ್ಟಿನಡಿ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
ರಾಯಚೂರು(ಜು.12): ಪತ್ನಿ ಶೀಲ ಶಂಕಿಸಿ ಪತಿರಾಯ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಗ್ರಾಮದ ನಿವಾಸಿ ಶಾರದಮ್ಮ (32) ಕೊಲೆಗೀಡಾದ ಪತ್ನಿಯಾಗಿದ್ದು, ಪತಿ ಕಿಷ್ಟಪ್ಪ (36) ಆರೋಪಿಯಾಗಿದ್ದಾನೆ. ಕೆಲ ವರ್ಷಗಳ ಹಿಂದೆ ಶಾರದಮ್ಮಳನ್ನು ಪ್ರೀತಿಸಿ ಮದುವೆಯಾಗಿದ್ದ ಕಿಷ್ಟಪ್ಪ ಪತ್ನಿಯು ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಆಕೆ ಶೀಲ ಶಂಕಿಸುತ್ತಿದ್ದನು. ಅದೇ ಸಿಟ್ಟಿನಡಿ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಘಟನೆ ಮಾಹಿತಿ ಪಡೆದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಹಾಗೂ ಪೊಲೀಸ್ ಅಧಿಕಾರಿ, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
undefined
ರಾಯಚೂರಿನಲ್ಲಿ ಟೊಮ್ಯಾಟೋಗಾಗಿ ಚಾಕು ಇರಿತ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮರಣೋತ್ತರ ಪರೀಕ್ಷೆಗಾಗಿ ಶವವನ್ನು ರಿಮ್ಸ್ ಬೋಧಕ ಆಸ್ಪತ್ರೆಗೆ ಸಾಗಿಸಿ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಘಟನೆಗೆ ಸಂಬಂಧಿಸಿ ಇಡಪನೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತಿ ಕಿಷ್ಟಪ್ಪನ್ನು ವಶಕ್ಕೆ ಪಡೆದು ಆತನ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.