
ಬೆಳಗಾವಿ(ಜ.31): ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗುವ ರೀತಿಯಲ್ಲಿ ದೇವತೆಗಳ ಫೋಟೋವನ್ನು ಅಶ್ಲೀಲವಾಗಿ ಮಾರ್ಪಡಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟವ್ಯಕ್ತಿಯನ್ನು ಬೆಳಗಾವಿ ನಗರದ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ, ಚಿಂತಾಮಣಿ ತಾಲೂಕಿನ ಚೌರಡ್ಡಿಪಾಳ್ಯ ಗ್ರಾಮದ ಇಮ್ರಾನ್ ಪಾಷಾ ಅಮಿರ್‌ಜಾನ್ (19) ಎಂದು ಗುರುತಿಸಲಾಗಿದೆ.
Davanagere: ಹಣಕಾಸಿನ ಜಗಳ ಮಧ್ಯೆ ಪ್ರವೇಶಿಸಿದ ಪೊಲೀಸರ ಮೇಲೆ ಹಲ್ಲೆ: ಯುವತಿಯರು ಸೇರಿ ನಾಲ್ವರ ಬಂಧನ
ಆರೋಪಿ ಜ.25ರಂದು ಛತ್ರಪತಿ ಶಿವಾಜಿ ಮಹಾರಾಜ, ಶ್ರೀರಾಮಚಂದ್ರ, ಲಕ್ಷ್ಮಣ, ಸೀತೆ, ಶ್ರೀ ಹನುಮಾನ ದೇವತೆಗಳ ಫೋಟೋಗಳನ್ನು ಅಶ್ಲೀಲವಾಗಿ ವಿರೂಪಗೊಳಿಸಿ ಹಿಂದೂ ದೇವತೆಗಳ ಆರಾಧಕರಿಗೆ ಮತ್ತು ಹಿಂದೂ ಧಾರ್ಮಿಕ ಭಾವನೆಗಳಿಗೆ ನೋವು ಉಂಟಾಗುವಂತೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದನು. ಇದರಿಂದ ಹಿಂದೂಪರ ಸಂಘಟನೆ ಹಾಗೂ ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದ್ದರ ಹಿನ್ನೆಲೆಯಲ್ಲಿ ವಿಕೃತ ಮನಸಿನ ದುಷ್ಕರ್ಮಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ನಗರದ ಸಿಇಎನ್ ಹಾಗೂ ಶಹಪೂರ ಠಾಣೆ ಪೊಲೀಸರು ದುಷ್ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸಿದ್ದಾರೆ. ಈ ಕುರಿತು ನಗರದ ಶಹಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ