
ದಾಬಸ್‌ಪೇಟೆ(ಜೂ.09): ತಂದೆಗೆ ಪರಿಚಿತನಾಗಿ ಆಗಿಂದಾಗ್ಗೆ ಮನೆಗೆ ಬರುತ್ತಿದ್ದ ಅಂಗಡಿಗಳಿಗೆ ತರಕಾರಿ ಸರಬರಾಜು ಮಾಡುತ್ತಿದ್ದ ತ್ಯಾಮಗೊಂಡ್ಲು ಹೋಬಳಿ ಅಲೇನಾಯಕನಹಳ್ಳಿ ಗ್ರಾಮದ ಶಿವಕುಮಾರ್ ಪಟ್ಟಣದ ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿಯ ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿ ಶಿವಕುಮಾರ್‌ಗೆ ಈಗಾಗಲೇ ಮದುವೆಯಾಗಿದ್ದರೂ ಅಪ್ರಾಪ್ತಗೆ ಮದುವೆಯ ಆಮಿಷವೊಡ್ಡಿ ಅಪ್ರಾಪ್ತೆ ಮನೆಗೆ ಆಗಿಂದಾಗ್ಗೆ ಹೋಗಿ ಬರುತ್ತಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಹೋಗಿ ಅವಳೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ. ಅಪ್ರಾಪ್ತೆ ಪ್ರತಿರೋಧ ತೋರಿದರೂ ಬಲವಂತವಾಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದು, ಈ ವಿಷಯ ಯಾರಿಗಾದರೂ ತಿಳಿಸಿದರೆ ನಿನ್ನ ತಂದೆ ತಾಯಿಯ ಕೊಲೆ ಮಾಡುತ್ತೇನೆಂದು ಬೆದರಿಸಿದ್ದರಿಂದ ಆಕೆ ಹೆದರಿಕೆಯಿಂದ ಯಾರಿಗೂ ತಿಳಿಸಿರಲಿಲ್ಲ. ಹಾಗೆಯೇ ಬೆದರಿಸಿ ಹಲವು ಬಾರಿ ಅತ್ಯಾಚಾರವೆಸಗುತ್ತಿದ್ದ.
ಲವ್ ಮಾಡ್ತಿದ್ದ ಹುಡ್ಗಿನ ಬೆಂಗ್ಳೂರಿಗೆ ಕರೆಸಿ, ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರ ಮಾಡಿದ ಪ್ರಿಯಕರ
ಮತ್ತೊಮ್ಮೆ ಮಗಳನ್ನು ಶಾಲೆಯ ಬಳಿ ಕರೆದೊಯ್ಯಲು ಹೊಂಚು ಹಾಕುತ್ತಿದ್ದ ವೇಳೆ, ಅಪ್ರಾಪ್ತೆ ತಂದೆಗೆ ವಿಚಾರ ತಿಳಿದು ವಿಚಾರಿಸಿದಾಗ ಎಲ್ಲಾ ವಿಷಯ ತಿಳಿಸಿದ್ದಾಳೆ. ಬಾಲಕಿ ತಂದೆ ದಾಬಸ್‌ಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ದಾಬಸ್‌ಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ