* 15 ವರ್ಷದ ಬಾಲಕಿ ಮೇಲೆ ಕಾಮುಕನ ಅಟ್ಟಹಾಸ
* ಆರೋಪಿ ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು
* ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡುತ್ತಾ ಬಂದಿದ್ದ ಆರೋಪಿ
ಹರಪನಹಳ್ಳಿ(ಜೂ.07): ಯನ್ನು ಅಪಹರಿಸಿಕೊಂಡು ಹೋಗಿ ಅತ್ಯಾಚಾರವೆಸಗಿದ ಆರೋಪದ ಮೇಲೆ ಯುವಕನೊಬ್ಬನನ್ನು ಇಲ್ಲಿಯ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ತಾಲೂಕಿನ ಮತ್ತಿಹಳ್ಳಿ ಗ್ರಾಮದ ಪ್ರವೀಣ ಅಲಿಯಾಸ್ ಕೊಟ್ರೇಶ (24) ಬಂಧಿತ ಆರೋಪಿ. ಅವನು ಅದೇ ಗ್ರಾಮದ 15 ವರ್ಷದ ಬಾಲಕಿಯನ್ನು ಕಳೆದ ಏ. 16ರಂದು ಅಪಹರಿಸಿಕೊಂಡು ಹೋಗಿದ್ದನು. ಸಂತ್ರಸ್ತೆ ಬಾಲಕಿಯ ತಂದೆ ನೀಡಿದ ದೂರನ್ನು ಚಿಗಟೇರಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಔಷಧ ಕೊಳ್ಳಲು ಬಂದವ ಮೆಡಿಕಲ್‌ಗೆ ನುಗ್ಗಿ ಯುವತಿ ನೋಡಿ ಅತ್ಯಾಚಾರಕ್ಕೆ ಯತ್ನಿಸಿದ
ಡಿವೈಎಸ್ಪಿ ವಿ.ಎಸ್. ಹಾಲಮೂರ್ತಿರಾವ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ನಾಗರಾಜ ಎಂ. ಕಮ್ಮಾರ ನೇತೃತ್ವದಲ್ಲಿ ಪಿಎಸ್‌ಐ ನಾಗರಾಜ, ಮುಖ್ಯ ಪೇದೆ ಮೋಹನ ಪಾಟೀಲ್, ಕುಮಾರ ಇತರ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಚೆನ್ನಪಟ್ಟಣದಲ್ಲಿದ್ದ ಆರೋಪಿ ಹಾಗೂ ಬಾಲಕಿ ಇಬ್ಬರನ್ನು ಪತ್ತೆ ಹಚ್ಚಿ ಕರೆದುಕೊಂಡು ಬಂದು ವಿಚಾರಣೆ ಮಾಡಿದ್ದಾರೆ.
ವಿಚಾರಣೆ ಸಂದರ್ಭದಲ್ಲಿ ಬಾಲಕಿ ಮೇಲೆ ಆರೋಪಿ ನಿರಂತರವಾಗಿ ಅತ್ಯಾಚಾರ ಮಾಡುತ್ತಾ ಬಂದಿರುವುದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೊಂದ ಬಾಲಕಿಯನ್ನು ಅವರ ಪೋಷಕರ ವಶಕ್ಕೆ ಒಪ್ಪಿಸಿ, ಆರೋಪಿ ಪ್ರವೀಣ ಅಲಿಯಾಸ್ ಕೊಟ್ರೇಶನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.