ಬಾಗಲಕೋಟೆ: ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ, ಕಾಮುಕನ ಬಂಧನ

Published : Jun 18, 2022, 05:30 AM IST
ಬಾಗಲಕೋಟೆ: ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ, ಕಾಮುಕನ ಬಂಧನ

ಸಾರಾಂಶ

*  ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲೂಕು ವ್ಯಾಪ್ತಿಯಲ್ಲಿ ನಡೆದ ಘಟನೆ *  ಬಾಲಕಿಯ ಮೆಲೆ ಅತ್ಯಾಚಾರ ಮಾಡಿದ ವ್ಯಕ್ತಿಯ ವಿರುದ್ಧ ಪೋಸ್ಕೋ ಕಾಯ್ದೆ ಅಡಿ ಕೇಸ್‌ ದಾಖಲು  *  ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಪೊಲೀಸ್‌ ಇಲಾಖೆ   

ಇಳಕಲ್ಲ(ಜೂ.18):  ಏಳು ವರ್ಷದ ಅಪ್ರಾಪ್ತೆ ಮೇಲೆ 32 ವರ್ಷದ ವ್ಯಕ್ತಿಯ ಎರಡು ಬಾರಿ ಲೈಂಗಿಕ ಅತ್ಯಾಚಾರ ನಡೆಸಿದ ಘಟನೆ ಇಳಕಲ್ಲ ತಾಲೂಕು ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬಲವಂತವಾಗಿ ಬಾಲಕಿಯ ಮೆಲೆ ಅತ್ಯಾಚಾರ ಮಾಡಿದ ವ್ಯಕ್ತಿಯ ವಿರುದ್ಧ ಪೋಸ್ಕೋ ಕಾಯ್ದೆ ಅಡಿ ಕೇಸ್‌ ದಾಖಲಿಸಿ ಸದ್ಯ 3 ಜನರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುನಗುಂದ ಸಿಪಿಐ ಹೊಸಕೇರಪ್ಪ ಹಾಗೂ ಇಳಕಲ್ಲ ಗ್ರಾಮೀಣ ಪೊಲೀಸ್‌ ಠಾಣೆ ಪಿಎಎಸ್‌ ಎಸ್‌ .ಬಿ.ಪಾಟೀಲ್‌ ಅವರ ನೇತೃತ್ವದಲ್ಲಿ ವಿಚಾರಣೆ ನಡೆಸಿದ್ದು ಆರೋಪಿಗಳನ್ನು ಗ್ರಾಮಕ್ಕೆ ಕರೆದೊಯ್ದು, ಘಟನೆ ನಡೆದ ಬಗ್ಗೆ ವಿವರ ಪಡೆದರು.

Crime News: ಮಗಳ ಮೇಲೆ 32 ವರ್ಷದ ತಂದೆಯಿಂದಲೇ ರೇಪ್:‌ ವಿಕೃತಕಾಮಿ ಬಂಧನ

ಹುನಗುಂದ ಹಾಗೂ ಇಳಕಲ್ಲ ತಾಲೂಕಿನಲ್ಲೇ ಈ ಹಿಂದೆ ಅಪ್ರಾಪ್ತೆ ವಯಸ್ಸಿನ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸ್‌ ಇಲಾಖೆ ತಿಳಿಸಿದೆ.

ಬಾಲಕಿ ಮೇಲಿನ ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ ಮಾಜಿ ಅದ್ಯಕ್ಷೆ ಶ್ರೀಮತಿ ವೀಣಾ ಕಾಶಪ್ಪನವರ, ಸಮಾಜ ಸೇವಕಿ ಜಯಶ್ರೀ ಸಾಲಿಮಠ ಹಾಗೂ ನಗರಸಭೆ ಸದಸ್ಯೆ ಮಾರನಬಸರಿ ಆಗ್ರಹಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ