ಚಾಮರಾಜನಗರ: ಅಪ್ರಾಪ್ತೆಯ ಮೇಲೆ ಅತ್ಯಾಚಾರ, ಕಾಮುಕನ ಬಂಧನ

Published : Dec 09, 2023, 12:54 PM IST
ಚಾಮರಾಜನಗರ: ಅಪ್ರಾಪ್ತೆಯ ಮೇಲೆ ಅತ್ಯಾಚಾರ, ಕಾಮುಕನ ಬಂಧನ

ಸಾರಾಂಶ

ಅಪ್ರಾಪ್ತೆಯ ತಾಯಿ ಪಕ್ಕದ ಮನೆಗೆ ತೆರಳಿದ್ದ ವೇಳೆ, ಆರೋಪಿಯು ಬಾಲಕಿಯನ್ನು ಮನೆ ಸಮೀಪದ ಗಲ್ಲಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಇದನ್ನು ಕಂಡ ಬಾಲಕಿಯ ತಾಯಿ ತಕ್ಷಣ ಕಿರುಚಿಕೊಂಡಿದ್ದಾರೆ. ತಕ್ಷಣವೇ ಆರೋಪಿಯು ಸ್ಥಳದಿಂದ ಓಡಿಹೋಗಿದ್ದು, ಈ ವೇಳೆ ಅಕ್ಕಪಕ್ಕದಲ್ಲಿದ್ದ ಸ್ಥಳೀಯರು ಆತನನ್ನು ಹಿಡಿದುಕೊಂಡು ಹಿಗ್ಗಾಮುಗ್ಗಾ ಥಳಿಸಿ, ಬಳಿಕ ಪಟ್ಟಣ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ.   

ಚಾಮರಾಜನಗರ(ಡಿ.09):  ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಿಗಿದ ಆರೋಪಿಯನ್ನು ಮಹಿಳಾ ಠಾಣೆಯ ಪೊಲೀಸರು ಬಂಧಿಸಿ ವಶಕ್ಕೆ ಪಡೆದಿರುವ ಘಟನೆ ಗುರುವಾರ ಇಲ್ಲಿ ನಡೆದಿದೆ. ನಗರದ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಬಡಾವಣೆಯೊಂದರಲ್ಲಿ ಈ ದುರ್ಘಟನೆ ನಡೆದಿದೆ. ಸಾರ್ವಜನಿಕರ ಥಳಿತದಿಂದ ಗಾಯಗೊಂಡ ಆರೋಪಿಯನ್ನು ಮಹಿಳಾ ಠಾಣೆಯ ಪೊಲೀಸರು ಸಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಘಟನೆ ವಿವರ: 

ಅಪ್ರಾಪ್ತೆಯ ತಾಯಿ ಪಕ್ಕದ ಮನೆಗೆ ತೆರಳಿದ್ದ ವೇಳೆ, ಆರೋಪಿಯು ಬಾಲಕಿಯನ್ನು ಮನೆ ಸಮೀಪದ ಗಲ್ಲಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಇದನ್ನು ಕಂಡ ಬಾಲಕಿಯ ತಾಯಿ ತಕ್ಷಣ ಕಿರುಚಿಕೊಂಡಿದ್ದಾರೆ. ತಕ್ಷಣವೇ ಆರೋಪಿಯು ಸ್ಥಳದಿಂದ ಓಡಿಹೋಗಿದ್ದು, ಈ ವೇಳೆ ಅಕ್ಕಪಕ್ಕದಲ್ಲಿದ್ದ ಸ್ಥಳೀಯರು ಆತನನ್ನು ಹಿಡಿದುಕೊಂಡು ಹಿಗ್ಗಾಮುಗ್ಗಾ ಥಳಿಸಿ, ಬಳಿಕ ಪಟ್ಟಣ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ನಂತರ ಆರೋಪಿಯನ್ನು ಮಹಿಳಾ ಠಾಣೆಗೆ ಕಳುಹಿಸಲಾಯಿತು. 

ಉಪ್ಪಿನಕಾಯಿ ಕೇಳುವ ನೆಪದಲ್ಲಿ ವಿಧವೆ ಗಲ್ಲ ಕಚ್ಚಿ ರೇಪ್‌ ಮಾಡಲು ಯತ್ನಿಸಿದ ಕಾಮುಕ!

ಆರೋಪಿಯಿಂದ ಪ್ರತಿ ದೂರು

ಈ ಪ್ರಕರಣದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಯನ್ನು ಹಿಗ್ಗಾಮುಗ್ಗಾ ಥಳಿಸಿದ್ದು, ಈ ಸಂಬಂಧ ಪಟ್ಟಣ ಠಾಣೆಯಲ್ಲಿ ಆರೋಪಿಯು ಥಳಿಸಿದವರ ವಿರುದ್ಧ ಪ್ರತಿ ದೂರು ಸಲ್ಲಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು