
ಬೆಂಗಳೂರು (ಏ.18): ಅಪ್ರಾಪ್ತ ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಣೆ ಮಾಡುತ್ತಿದ್ದ ಆರೋಪದ ಮೇರೆಗೆ ಖಾಸಗಿ ಬ್ಯಾಂಕ್‌ವೊಂದರ ಕಾವಲುಗಾರನನ್ನು ಪೂರ್ವ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ನೂರ್ ಇಸ್ಲಾಂ ಚೌದ್ರಿ ಬಂಧಿತನಾಗಿದ್ದು, ಆರೋಪಿಯಿಂದ ಮೊಬೈಲ್ ಜಪ್ತಿ ಮಾಡಲಾಗಿದೆ. ಈತನ ಬಗ್ಗೆ ಗೃಹ ಇಲಾಖೆಯ ನೀಡಿದ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಿಂಗಳ ಹಿಂದಷ್ಟೇ ಉದ್ಯೋಗ ಅರಸಿ ನಗರಕ್ಕೆ ಬಂದಿದ್ದ ನೂರ್, ನಗರದ ಖಾಸಗಿ ಬ್ಯಾಂಕ್‌ವೊಂದರ ಕಾವಲುಗಾರನಾಗಿ ನೇಮಕಗೊಂಡಿದ್ದ. ಪೋರ್ನ್ ವೆಬ್‌ಸೈಟ್‌ಗಳಲ್ಲಿ ಅಪ್ರಾಪ್ತ ಮಕ್ಕಳ ಅಶ್ಲೀಲ ವಿಡಿಯೋ ಡೌನ್ ಲೋಡ್ ಮಾಡಿಕೊಂಡು ವೀಕ್ಷಿಸುವುದಲ್ಲದೆ ಆ ವಿಡಿಯೋಗಳನ್ನು ಬೇರೆಯವರಿಗೆ ಸಹ ಆತ ಕಳುಹಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಅಪ್ರಾಪ್ತ ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಿಸುವವರ ಮೇಲೆ ಕೇಂದ್ರ ಗೃಹ ಇಲಾಖೆಯ ನ್ಯಾಷನಲ್ ಸೆಂಟರ್ ಫಾರ್ ಮಿಸ್ಸಿಂಗ್ ಅಂಡ್ ಎಕ್ಸ್‌ಪೊಲೈಟೆಡ್ (ಎನ್‌ಸಿಎಫ್‌ಎಂಇಸಿ) ವೆಬ್‌ಸೈಟ್ ನಿಗಾವಹಿಸಿದೆ. ಅಂತೆಯೇ ಇತ್ತೀಚಿಗೆ ನೂರ್ ಚಲನವಲನ ಕುರಿತು ಮಾಹಿತಿ ಪಡೆದ ಕೇಂದ್ರ ಗೃಹ ಇಲಾಖೆ, ಆತನ ಕುರಿತು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿತು. ಈ ಸುಳಿವು ಆಧರಿಸಿ ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಚಿತ್ರೀಕರಣ: ಯೂಟ್ಯೂಬರ್ ಬಂಧನ
ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್ ದಾಖಲು: ಉಜಿರೆ ಶಾಲೆಯೊಂದರ ಶಿಕ್ಷಕ 6 ನೇ ತರಗತಿಯ ಅಪ್ರಾಪ್ತ ಬಾಲಕಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಕಿರುಕುಳ ನೀಡುತ್ತಿದ್ದ. ಈತನ ಕೃತ್ಯದಿಂದಾಗಿ ಬಾಲಕಿ ಶಾಲೆಗೆ ಹೋಗಲು ಹಿಂದೇಟು ಹಾಕುತ್ತಿದ್ದಳು. ಈ ಬಗ್ಗೆ ಪೋಷಕರು ಬಾಲಕಿಯನ್ನು ವಿಚಾರಿಸಿದಾಗ ಆಕೆ ವಿಷಯ ತಿಳಿಸಿದ್ದು, ಪೋಷಕರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ. ದೂರಿನಂತೆ ಆರೋಪಿ ಶಿಕ್ಷನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ