
ಜೇವರ್ಗಿ(ಡಿ.21): ಪಟ್ಟಣದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಸ್ನಾನಗೃಹಕ್ಕೆ ಕ್ಯಾಮೆರಾ ಅಳವಡಿಸಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ವಸತಿ ನಿಲಯಕ್ಕೆ ಕ್ಯಾಮೆರಾ ಅಳವಡಿಸಿದ ವ್ಯಕ್ತಿಯನ್ನು ಸಲೀಂ ಅಲಿ ಎಂದು ಗುರುತಿಸಲಾಗಿದೆ. ವಸತಿ ನಿಲಯದ ಪಕ್ಕದ ಕಟ್ಟಡದಲ್ಲಿ ಬಾಡಿಗೆ ಪಡೆದಿದ್ದ ಆರೋಪಿ ಮೂಲತಃ ಮಂದೇವಾಲ ಗ್ರಾಮದವನಾಗಿದ್ದು, ಬೆಳ್ಳೆೊಳ್ಳಿ ವ್ಯಾಪಾರ ಮಾಡಿಕೊಂಡಿದ್ದ.
ಕಲಬುರಗಿ: ಕೋಡ್ಲಾ ವಸತಿ ಶಾಲೆಯ 23 ವಿದ್ಯಾರ್ಥಿನಿಯರು ಅಸ್ವಸ್ಥ
ಪಕ್ಕದ ವಸತಿ ನಿಲಯದ ಸ್ನಾನಗೃಹದ ಕಿಟಕಿಯಿಂದ ಪೈಪ್ ಬಳಸಿ ಅದಕ್ಕೆ ವೈಫೈ ಕ್ಯಾಮೆರಾ ಅಳವಡಿಸಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಅದೃಷ್ಟವಶಾತ್ ಈ ಕ್ಯಾಮೆರಾ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರ ಕಣ್ಣಿಗೆ ಬಿದ್ದು ಮೇಲ್ವಿಚಾರಕರ ಗಮನಕ್ಕೆ ತಂದಾಗ ಮೇಲ್ವಿಚಾರಕರು ಆರೋಪಿಯನ್ನು ಥಳಿಸಿ ಪೊಲೀಸರ ಸುಪರ್ದಿಗೆ ಒಪ್ಪಿಸಿದ್ದಾರೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ