
ಬೆಂಗಳೂರು(ನ.22): ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋ ಚಿತ್ರೀಕರಿಸುತ್ತಿದ್ದ ವಿದ್ಯಾರ್ಥಿಯೊಬ್ಬನನ್ನ ಪೊಲೀಸರು ಬಂಧಿಸಿದ್ದಾರೆ. ಶುಭಂ ಎಂ ಆಜಾದ್ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿ ಹೊಸಕೆರೆಹಳ್ಳಿ ಬಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದಾನೆ ಅಂತ ತಿಳಿದು ಬಂದಿದೆ. ಬಿಬಿಎ ಎಲ್‌ಎಲ್‌ಬಿ ಐದನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದಾನೆ ಬಂಧಿತ ಆರೋಪಿ.
ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಫಿಕ್ಸ್ ಮಾಡಿ 1200 ಕ್ಕೂ ಅಧಿಕ ವಿಡಿಯೋ ಹಾಗೂ ಪೋಟೋಗಳನ್ನ ಚಿತ್ರೀಕರಿಸಿದ್ದಾನೆ. ಸ್ನೇಹಿತೆಯರು ಜೊತೆಯಲ್ಲಿದ್ದಾಗಲು ಅವರ ಅರೆನಗ್ನ ಪೋಟೋ ತೆಗೆದಿದ್ದಾನಂತೆ. ಇತ್ತೀಚೆಗೆ ಕಾಲೇಜು ಶೌಚಾಲಯದಲ್ಲಿ ಕ್ಯಾಮೆರಾ ಅಳವಡಿಸಲು ಹೋದಾಗ ಯುವತಿಯರು ಚೀರಾಡಿದ್ದಾರೆ. ಈ ವೇಳೆ ಆರೋಪಿ ಪರಾರಿಯಾಗಿದ್ದನು.
Sexual harassment : 7 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 5ವರ್ಷ ಜೈಲು
ಸಿಸಿಟಿವಿ ಪರಿಶೀಲನೆ ವೇಳೆ ಶುಭಂ ಕೃತ್ಯ ಬೆಳಕಿಗೆ ಬಂದಿದೆ. ಈ ಹಿಂದೆಯೂ ಇದೇ ರೀತಿ ಮಾಡಿ ಶುಭಂ ಎಂ ಆಜಾದ್ ಅಪಾಲಜಿ ಬರೆದುಕೊಟ್ಟಿದ್ದನಂತೆ. ಮತ್ತೆ ತನ್ನ ಚಾಳಿ ಮುಂದುವರೆಸಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧಿತ ಮೊಬೈಲ್‌ನಲ್ಲಿ 1200 ಕ್ಕೂ ಅಧಿಕ ವಿಡಿಯೋ ಹಾಗೂ ಪೋಟೋಗಳು ಪತ್ತೆಯಾಗಿವೆ. ಆರೋಪಿ ಬಳಿ ಮತ್ತೊಂದು ಮೊಬೈಲ್ ಇದ್ದು ಅದರಲ್ಲಿ ಮತ್ತಷ್ಟು ವಿಡಿಯೋಗಳು ಪತ್ತೆಯಾಗುವ ಸಾಧ್ಯತೆ ಇದೆ. ಈ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆಯನ್ನ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ