
ರಾಯಚೂರು, (ಅ.02): ರಾಯಚೂರಿನ ಯರಮರಸ್ ಕ್ಯಾಂಪ್ ನ ಒಂದೇ ಕುಟುಂಬದ ಮೂವರನ್ನ ಕೊಂದು ಪರಾರಿಯಾಗಿದ್ದ ಆರೋಪಿಯನ್ನು 48 ಗಂಟೆಗಳಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿ ಸಾಯಿ ಅಲಿಯಾಸ್ ಸೌರಭ್ ಎನ್ನುವಾತನನ್ನು ಇಂದು (ಅ.02) ಹೈದ್ರಾಬಾದ್‌ನಲ್ಲಿ ಬಂಧಿಸಲಾಗಿದೆ. ಸೆಪ್ಟೆಂಬರ್ 29 ರಂದು ಪತ್ನಿ, ಅತ್ತೆ, ಪತ್ನಿ ತಂಗಿಯನ್ನ ಕೊಲೆ ಮಾಡಿ ಪರಾರಿಯಾಗಿದ್ದ. ಘಟನೆ ಕಾರಣರಾದ ಇನ್ನೂ ಇಬ್ಬರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ರಾಯಚೂರು: ಪತ್ನಿ, ನಾದಿನಿ, ಅತ್ತೆಯನ್ನ ಕೊಂದ ಅಳಿಯ, ಕಾರಣ?
ಕೌಟುಂಬಿಕ ಕಲಹ ಹಿನ್ನೆಲೆ ಸಂತೋಷಿ, ವೈಷ್ಣವಿ ಮತ್ತು ಆರತಿ ಎಂಬುವವರ ಕೊಲೆ ನಡೆದಿತ್ತು. ಈ ಬಗ್ಗೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ನಾಲ್ಕು ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು.
ಘಟನೆ ನಡೆದ 48 ಗಂಟೆಯಲ್ಲಿಯೇ ಆರೋಪಿಯನ್ನ ಪೊಲೀಸರು ಸೆರೆ ಹಿಡಿದಿದ್ದು, ನಿಜಕ್ಕೂ ಶ್ಲಾಘನೀಯ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ