ಬೆಳಗಾವಿ: ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿದವ ಸೆರೆ

By Kannadaprabha News  |  First Published Jan 5, 2024, 9:15 PM IST

ಗಂಭೀರಗಾಯಗೊಂಡಿದ್ದ ಸಂತ್ರಸ್ತೆಯನ್ನು ಬಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲದೇ, ಮೂಗಿನ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದ್ದು, ಸಂತ್ರಸ್ತೆಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಕೊನೆಗೂ ಆರೋಪಿ ಕಲ್ಲಪ್ಪನ್ನು ಬಂಧಿಸಿದ ಪೊಲೀಸರು 


ಯಮಕನಮರಡಿ(ಜ.05):  ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಪೊಲೀಸರು ಆರೋಪಿಯನ್ನು ಗುರುವಾರ ಬಂಧಿಸಿದ್ದಾರೆ.

ಕಲ್ಲಪ್ಪ ಉರ್ಫ ಕಲ್ಯಾಣಿ ಜ್ಯೋತಿಬಾ ಮೋರೆ ( 44) ಬಂಧಿತ ಆರೋಪಿ. ಅಂಗನವಾಡಿ ಕೇಂದ್ರ ಮಕ್ಕಳು ತಮ್ಮ ಮನೆಯ ಬಳಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಆರೋಪಿ ಕಲ್ಯಾಣಿ, ಅಂಗನವಾಡಿ ಕಾರ್ಯಕರ್ತೆ ಮೀರಾ ಮೋರೆ ಜೊತೆಗೆ ಜಗಳ ತೆಗೆದಿದ್ದ. ಇಬ್ಬರ ನಡುವೆ ವಾಗ್ವಾದ ನಡೆಯುತ್ತಿದ್ದ ವೇಳೆ ಅಂಗನವಾಡಿ ಸಹಾಯಕಿ ಸುಗಂಧಾ ಮೋರೆ (50) ಮಧ್ಯ ಪ್ರವೇಶಿಸಿ ಜಗಳ ಬಿಡಿಸಲು ಮುಂದಾದ ವೇಳೆ ಆತ ಕುಡುಗೋಲಿನಿಂದ ಕಲ್ಲೆ ನಡೆಸಿ ಆಕೆಯ ಮೂಗನ್ನು ಕತ್ತರಿಸಿದ್ದ.

Tap to resize

Latest Videos

ಮನೆ ಬಳಿ ಮಕ್ಕಳು ಮೂತ್ರ ಮಾಡಿದ್ದಕ್ಕೆ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿದ ಪಾಪಿಗಳು!

ಗಂಭೀರಗಾಯಗೊಂಡಿದ್ದ ಸಂತ್ರಸ್ತೆಯನ್ನು ಬಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲದೇ, ಮೂಗಿನ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದ್ದು, ಸಂತ್ರಸ್ತೆಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಕೊನೆಗೂ ಪೊಲೀಸರು ಆರೋಪಿ ಕಲ್ಲಪ್ಪನ್ನು ಬಂಧಿಸಿದ್ದಾರೆ.

click me!