ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದ ನಯಾರ ಪೆಟ್ರೋಲ್ ಬಂಕ್‌ನಲ್ಲಿ ನಡೆದ ಘಟನೆ.
ಚಿಕ್ಕಮಗಳೂರು(ಸೆ.02): ಡ್ಯೂಟಿ ಮುಗೀತು ಬೇರೆಯವರು ಪೆಟ್ರೋಲ್ ಹಾಕ್ತಾರೆ ಎಂದಿದ್ದಕ್ಕೆ ವಾಹನ ಸವಾರನೊಬ್ಬ ಪೆಟ್ರೋಲ್ ಬಂಕ್ ಸಿಬ್ಬಂದಿಗಳನ್ನ ಅಟ್ಟಾಡಿಸಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದ ನಯಾರ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ.
ಕಾರಿಗೆ ಪೆಟ್ರೋಲ್ ಹಾಕಿಸುವ ವಿಚಾರವಾಗಿ ವಾಹನ ಸವಾರ ಮಧು ಹುರುಡಿ ಎಂಬಾತ ಸಿಬ್ಬಂದಿಗಳ ಜೊತೆ ಕಿರಿಕ್ ತೆಗೆದು ಕಾರಿನಲ್ಲಿದ್ದ ಕ್ರಿಕೆಟ್ ಬ್ಯಾಟ್‌ನಿಂದ ಸಿಬ್ಬಂದಿಗಳ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಪೆಟ್ರೋಲ್ ಬಂಕ್ ಮ್ಯಾನೇಜರ್ ಸೇರಿದಂತೆ ನಾಲ್ವರ ಮೇಲೆ ಮಧು ಹುರುಡಿ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿದ ದೃಶ್ಯವನ್ನ ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.
undefined
ನಾರಾಯಣ ಗುರುಗಳಂತಹರಿಂದಾಗಿ ನಮ್ಮ ಸಂಸ್ಕಾರಗಳು ಉಳಿದಿವೆ: ಶೋಭಾ ಕರಂದ್ಲಾಜೆ
ಬಂಕ್ ಸಿಬ್ಬಂದಿ ಡ್ಯೂಟಿ ಮುಗಿಸಿ ಹೊರಡುವ ವೇಳೆ ವೇಳೆಗೆ ಕಾರಿನಲ್ಲಿ ಬಂದು ಪೆಟ್ರೋಲ್ ಹಾಕಲು ಹೇಳಿದ್ದಾನೆ. ಈ ವೇಳೆ ಡ್ಯೂಟಿ ಮುಗೀತು ಹೊರಟಿದ್ದೇನೆ, ಮಹಿಳೆ ಪೆಟ್ರೋಲ್ ಹಾಕ್ತಾರೆ ಎಂದಿದ್ದಕ್ಕೆ ಹಲ್ಲೆ ಮಾಡಿದ್ದಾನೆ.
ಈ ಸಂಬಂಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಕಾರು ಸವಾರ ಮಧು ಹುರುಡಿ ವಿರುದ್ಧ ಪ್ರಕರಣ ದಾಖಲಾಗಿದೆ.