ಬೆಳಗಾವಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕಾಮುಕ ಆತ್ಮಹತ್ಯೆಗೆ ಶರಣು

Published : Jan 21, 2025, 10:02 AM IST
ಬೆಳಗಾವಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕಾಮುಕ ಆತ್ಮಹತ್ಯೆಗೆ ಶರಣು

ಸಾರಾಂಶ

ರಾಮದುರ್ಗ ತಾಲೂಕಿನ ಕೊಣ್ಣೂರು ಗ್ರಾಮದ ಈರಪ್ಪ ಕರಡಿ ಎಂಬಾತನೇ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು ಬಳಿಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಬೆಳಗಾವಿ(ಜ.21): ಬೆಳಗಾವಿಯಲ್ಲಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು ಆರೋಪಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ನಡೆದಿದೆ. 

ರಾಮದುರ್ಗ ತಾಲೂಕಿನ ಕೊಣ್ಣೂರು ಗ್ರಾಮದ ಈರಪ್ಪ ಕರಡಿ ಎಂಬಾತನೇ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು ಬಳಿಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಕೃಷಿ ಕಾರ್ಮಿಕನಾಗಿದ್ದ ಈರಪ್ಪ ತೋರಣಗಟ್ಟಿಯಲ್ಲಿ ವಾಸವಾಗಿದ್ದ. ಮೊಬೈಲ್ ಆಸೆ ತೋರಿಸಿ ತನ್ನ ಮನೆಗೆ ಬಾಲಕಿಯನ್ನು ಕರೆದೊಯ್ದಿದ್ದ. ಬಳಿಕ ಕಾಮುಕ ಈರಪ್ಪ ಪುಟ್ಟ ಕಂದಮ್ಮನ ಮೇಲೆ ಅಟ್ಟಹಾಸ ಮೆರೆದಿದ್ದ. 

ದೇವದುರ್ಗ: ಮೂತ್ರ ವಿಸರ್ಜನೆಗೆ ಹೋಗಿದ್ದ ಬಾಲಕಿಯನ್ನ ಹಿಂಬಾಲಿಸಿ ಬಲತ್ಕಾರಕ್ಕೆ ಯತ್ನಿಸಿದ ಕಾಮುಕ!

ಅತ್ಯಾಚಾರಗೈದ ವಿಷಯ ಬಾಲಕಿ ಕುಟುಂಬಸ್ಥರಿಗೆ ಗೊತ್ತಾಗ್ತಿದ್ದಂತೆ ಈರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲೇ ನೇಣುಬಿಗಿದುಕೊಂಡು ಕಾಮುಕ ಈರಪ್ಪ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟ‌ನೆ ನಡೆದಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!