
ಆನೇಕಲ್ (ಮಾ.19): ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ಹೆಂಡತಿ ಮುಖಕ್ಕೆ ಆಸಿಡ್ ಎರಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಹೊರವಲಯದ ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಗೌರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಾಜಿಯಾಬೇಗಂ(40) ಆಸಿಡ್ ದಾಳಿಯಿಂದ ಗಾಯಗೊಂಡಿರುವ ಮಹಿಳೆ. ಗಂಡ ಚಾಂದ್ ಪಾಷಾ ಎಂಬಾತನಿಂದ ಕೃತ್ಯ. ಆರೋಪಿ ಚಾಂದ್ ಪಾಷಾ ವೃತ್ತಿಯಲ್ಲಿ ಮೋಟರ್ ಸೈಕಲ್ ಮೆಕಾನಿಕ್ ಆಗಿದ್ದಾನೆ. ಕುಡಿತದ ಚಟಕ್ಕೆ ಬಿದ್ದಿದ್ದ ಆರೋಪಿ. ದಿನನಿತ್ಯ ಕುಡಿದು ಬಂದು ಹೆಂಡತಿಯೊಂದಿಗೆ ಜಗಳ ತೆಗೆಯುತ್ತಿದ್ದ. ದುಡಿದ ದುಡ್ಡೆಲ್ಲ ಕುಡಿತಕ್ಕೆ ಖಾಲಿಯಾಗುತ್ತಿದೆ. ಇತ್ತ ಮನೆಯಲ್ಲಿ ಅಡುಗೆ ಮಾಡಲು ತರಕಾರಿ ದಿನಸಿ ಸಾಮಾನುಗಳನ್ನು ತರುವಂತೆ ಹೆಂಡತಿ ನಾಜಿಯಾಬೇಗಂ ಹೇಳುತ್ತಿದ್ದಂತೆ ಜಗಳ ಮಾಡುತ್ತಿದ್ದ ಆರೋಪಿ. ಅಡುಗೆ ಸಾಮಾನು ತರಲು ಹೇಳಿದಾಗೆಲ್ಲ ಜಗಳ ಮಾಡುತ್ತಿದ್ದ ಕಿರಾತಕ ಗಂಡ. ನಿನ್ನೆ ಮಧ್ಯೆರಾತ್ರಿ ಗಾಜಿನ ಬಾಟಲಿಯಲ್ಲಿ ಶೌಚಾಲಯ ಕ್ಲೀನ್ ಮಾಡುವ ಆಸಿಡ್ ತಂದು ಮುಖಕ್ಕೆ ಎರಚಿ ಪರಾರಿಯಾಗಿದ್ದಾನೆ.
ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ನಾಲ್ವರು ಗಂಭೀರ ಗಾಯ!
ಸದ್ಯ ಕೆಂಪೇಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆ. ಪ್ರಕರಣ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ