Jarkiholi CD Scandal: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ, ಪೊಲೀಸ್ ಅಧಿಕಾರಿಗಳಿಗೆ ಸಂಕಷ್ಟ.!?

By Suvarna News  |  First Published Nov 24, 2021, 10:56 PM IST

* ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ
* ಮೂವರು ಪೊಲೀಸ್ ಅಧಿಕಾರಿಗಳಿಗೆ ಸಂಕಷ್ಟ.!?
* ತನಿಖಾ  ವಿರುದ್ಧ ತನಿಖೆಗೆ ಕೋರ್ಟ್ ಆದೇಶ


ಬೆಂಗಳೂರು, (ನ.24): ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಮಾಜಿ ಸಚಿವ, ಬಿಜೆಪಿ(BJP) ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi)  ರಾಸಲೀಲೆ ಸಿಡಿ ಪ್ರಕರಣ (Sex CD Case) ಮತ್ತೆ ಮುನ್ನೆಲೆಗೆ ಬಂದಿದೆ.

ಹೌದು...ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು (Ramesh Jarkiholi Scandal CD Case) ಗಂಭಿರವಾಗಿ ಪರಿಗಣಿಸದ ಪೊಲೀಸ್ ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ.

Tap to resize

Latest Videos

ಜಾರಕಿಹೊಳಿ ಸಿಡಿ ಕೇಸ್‌ ಮಾಜಿ ಸಚಿವರಿಗೆ ಕೊಂಚ ರಿಲೀಫ್

ಸಾಮಾಜಿಕ ಕಾರ್ಯಕರ್ತರ ದಿನೇಶ್ ಕಲ್ಲಳ್ಳಿ ನೀಡಿದ್ದ ದೂರು ಗಂಭಿರವಾಗಿ ಪರಿಗಣಿಸದ ಪೊಲೀಸ್ ಕಮಿಷನರ್ ಕಮಲ್ ಪಂಥ್ , ಡಿಸಿಪಿ ಅನುಚೇತ್ ಹಾಗು ಕಬ್ಬನ್ ಪಾರ್ಕ್ ಇನ್ಸ್ ಪೆಕ್ಟರ್ ಮಾರುತಿ ವಿರುದ್ಧ ತನಿಖೆಗೆ ಕೋರ್ಟ್ ಆದೇಶ ಹೊರಡಿಸಿದೆ.

 ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ (Bengaluru 8th ACMM Court) ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದು,  ಮೂವರು ಪೊಲೀಸ್ ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ.

ಎಸಿಎಂಎಂ ಕೋರ್ಟ್ (ACMM Court) ) ಆದೇಶ ಪ್ರಶ್ನಿಸಿ ಎಸ್ಐಟಿ ವಿಶೇಷ ಅಭಿಯೋಕ ಪ್ರಸನ್ನ ಕುಮಾರ್ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದು, ಎಸಿಎಂಎಂ ಆದೇಶ ರದ್ದುಪಡಿಸುವಂತೆ ಹೈಕೋರ್ಟ್‌ ಅರ್ಜಿ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಎಸ್ಐಟಿ ವಿಶೇಷ ಅಭಿಯೋಕ ಪ್ರಸನ್ನ ಕುಮಾರ್ ಸಲ್ಲಿಸಿರುವ ಅರ್ಜಿಯನ್ನು ನಾಳೆ ನ.25ರಂದು ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಲಿದ್ದು, ಕೋರ್ಟ್ ಏನು ಹೇಳುತ್ತೆ ಎನ್ನುವುದು ಭಾರೀ ಕುತೂಲಹ ಮೂಡಿಸಿದೆ.

ರಮೇಶ ಜಾರಕಿಹೊಳಿ ಅತ್ಯಾಚಾರ ಎಸಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ರು. ಎಫ್ ಐ ಆರ್ ದಾಖಲಿಸದೆ ಪೊಲೀಸರಿಂದ ನಿರ್ಭಯ ಗೈಡ್ ಲೈನ್ಸ್ ಉಲ್ಲಂಘನೆ ಮಾಡಿದ್ರು.
 
ಈ ಹಿನ್ನೆಲೆಯಲ್ಲಿ ಜನಾಧಿಕಾರ ಸಂಘರ್ಷ ಪರಿಷತ್‌ನ ಆದರ್ಶ ಅಯ್ಯರ್ ಪಿಸಿಆರ್ ಸಲ್ಲಿಸಿದ್ದು, ಪೊಲೀಸ್ ಅಧಿಕಾರಿಗಳು ಕಾನೂನು ಉಲ್ಲಂಘಿಸಿದ್ದಾರೆ ಎಂದು ಆರೋಪ ಮಾಡಿದ್ದರು.

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿ.ಡಿ. ಪ್ರಕರಣದ  ಕುರಿತು ವಿಶೇಷ ತನಿಖಾ ತಂಡ(ಎಸ್‌ಐಟಿ SIT) ತನಿಖೆ ನಡೆಸಿ ಸಿದ್ಧಪಡಿಸಿರುವ ವರದಿಯನ್ನು ತಂಡದ ಮುಖ್ಯಸ್ಥರು ಪರಿಶೀಲಿಸಿ ಸಲ್ಲಿಸುವವರೆಗೂ ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸದಂತೆ ಹೈಕೋರ್ಟ್‌ (Karnataka high court) ಸೂಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸಿ ಸಿದ್ಧಪಡಿಸಿರುವ ತನಿಖಾ ವರದಿಯನ್ನು (Report) ಎಸ್‌ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಪರಿಶೀಲಿಸಬೇಕು. ವರದಿಯ ಕುರಿತು ತಮ್ಮ ಅಭಿಪ್ರಾಯವನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚನೆ ನೀಡಿದ ನ್ಯಾಯಪೀಠ, ವಿಚಾರಣೆಯನ್ನು ನ.29ಕ್ಕೆ ಮುಂದೂಡಿದೆ.

click me!