
ಬೆಂಗಳೂರು (ಮಾ.21): ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ಚೇತನ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವದ ವಿರೋಧಿ ಟ್ವೀಟ್ ಮಾಡಿದ ಹಿನ್ನೆಲೆಯಲ್ಲಿ ಶೇಷಾದ್ರಿಪುರಂ ಠಾಣೆಗೆ ದೂರು ದಾಖಲಾಗಿತ್ತು. ಈ ದೂರಿನ ಆಧಾರದಲ್ಲಿ ಇಂದು ಬೆಳಗ್ಗೆ ಚೇತನ್ ಅವರನ್ನು ಬಂಧಿಸಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ಪ್ರಕರಣವನ್ನು ವಿಚಾರಣೆ ಮಾಡಿದ 32ನೇ ಎಸಿಎಂಎಂ ನ್ಯಾಯಾಲಯವು ಚೇತನ್‌ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶವನ್ನು ಹೊರಡಿಸಿದೆ.
ನಟ ಅಹಿಂಸಾ ಚೇತನ್ ಬಂಧನ: ಹಿಂದುತ್ವದ ವಿರುದ್ಧ ಕೆಟ್ಟದಾಗಿ ಪೋಸ್ಟ್
ಪೊಲೀಸರಿಂದ ಸುಳ್ಳು ಕೇಸ್ ದಾಖಲಾಗಿದೆ ಎಂದು ವಾದ: ಮತ್ತೊಂದೆಡೆ ನಟ ಚೇತನ್ ಪರ ವಕೀಲರಿಂದ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇನ್ನು ಹಿಂದುತ್ವ ವಿರೋಧಿ ಪೋಸ್ಟ್ ಅನ್ನು ನಟ ಚೇತನ್ ಅವರೇ ಬರೆದಿದ್ದಾರೆ ಅನ್ನೋದಕ್ಕೆ ಸಾಕ್ಷಿ ಇಲ್ಲ. ಈ ಬಗ್ಗೆ ಪೊಲೀಸರು ಸುಳ್ಳು ಕೇಸ್ ಅನ್ನು ದಾಖಲಿಸಿಕೊಂಡಿದ್ದಾರೆ. ಹೀಗಾಗಿ, ಚೇತನ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಎಂದು ವಾದ ಮಂಡಿಸಿದ್ದಾರೆ. ಆದರೆ, ಈ ಬಗ್ಗೆ ಪೂರ್ಣ ಪ್ರಮಾಣದಲ್ಲಿ ವಿಚಾರಣೆ ನಡೆಸುವ ಉದ್ದೇಶದಿಂದ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಪೋಸ್ಟ್‌ನಲ್ಲಿ ಏನಿದೆ.?:
ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಟ್ವೀಟ್ ಮಾಡಿದ ಬಗ್ಗೆ ಶಿವಕುಮಾರ್ ಎನ್ನುವವರು ಬಂದು ದೂರು ದಾಖಲಿಸಿದ್ದರು. ಈ ದೂರಿನ ಬೆನ್ನಲ್ಲೇ ಶೇಷಾದ್ರಿಪುರಂ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು. ನಂತರ ನಟ ಚೇತನ್ ಅವರನ್ನು ಇಂದು ಬೆಳಗ್ಗೆ ಬಂಧನ ಮಾಡಿದ ಪೊಲೀಸರು, ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಅಲ್ಲಿ ನಡೆದ ವಿಚಾರಣೆಯಿಂದ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ ಆದೇಶವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ