
ರಾಮನಗರ (ಅ.06): ನಟಿ ಸೌಜನ್ಯ (Soujanya) ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂಬಳಗೂಡು ಪೊಲೀಸರು (Police) ಆಕೆ ಬಳಸುತ್ತಿದ್ದ ಮೊಬೈಲ್‌ನ ಕರೆಗಳನ್ನು ಆಧಾರವಾಗಿಟ್ಟುಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. ಕುಂಬಳಗೋಡು ಬಳಿಯ ಅಪಾರ್ಟ್‌ಮೆಂಟ್ (Apartment) ಒಂದರಲ್ಲಿ ಸೌಜನ್ಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಆಕೆಯ ತಂದೆ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಸಾವಿನ ಬಗ್ಗೆ ಅನುಮಾನ ವ್ಯಕ್ತರಪಡಿಸಿ ಆಕೆಯ ತಂದೆ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಸೌಜನ್ಯರ ಸ್ನೇಹಿತ ವಿವೇಕ್ ಹಾಗೂ ಮೇಕಪ್ ಮ್ಯಾನ್ ಮಹೇಶ್ ನನ್ನು ಪೊಲೀಸರು ವಿಚಾರಣೆಗೆ ಒಳ ಪಡಿಸಿದ್ದರು. ಇದೀಗ ಪೊಲೀಸರು ಆಕೆ ಯಾರಿಗೆಲ್ಲ ಫೋನ್ ಮಾಡುತ್ತಿದ್ದರು, ಯಾರಿಂದ ಅವರಿಗೆ ಫೋನ್ ಕರೆಗಳು ಬಂದಿವೆ ಎಂದು ಪೊಲೀಸರು ಸಂಪರ್ಕಿತರ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಹೀಗಾಗಿ ಆಕೆಯೊಂದಿಗೆ ಯಾರೆಲ್ಲ ಹೆಚ್ಚು ಸಂಪರ್ಕದಲ್ಲಿದ್ದರೊ ಅವರೆಲ್ಲರನ್ನು ಪೊಲೀಸರು ವಿಚಾರಣೆಗೊಳಿಸುವ ಸಾಧ್ಯತೆಗಳಿವೆ.
ಕಿರುತೆರೆ ನಟಿ ಸುಸೈಡ್ ಕೇಸ್‌ಗೆ ಟ್ವಿಸ್ಟ್.. ಮದುವೆಯಾಗು ಎಂದು ಕಿರುಕುಳ ಕೊಡ್ತಿದ್ದ ನಟ!
ಇದೇ ವೇಳೆ ಸೆಲೆಬ್ರಿಟಿ ಬದುಕು ನಡೆಸಲು ಸೌಜನ್ಯ ಬಳಿ ಸಾಕಷ್ಟುಹಣ ಇರಲಿಲ್ಲ. ಸೆಲೆಬ್ರಿಟಿ ಬದುಕು ನಡೆಸಲು ಹೆಚ್ಚು ಸಾಲ ಕೂಡ ಮಾಡಿಕೊಂಡಿದ್ದರು. ಹಣದ ವ್ಯವಹಾರದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎಂಬ ಮಾಹಿತಿ ಪೊಲೀಸರ ತನಿಖೆ ವೇಳೆ ಮಾಹಿತಿ ಬಹಿರಂಗವಾಗಿದೆ. ಜೀವನ ಬೇಜಾರಾಗಿದೆ ಎಂದು ಹಲವು ಸ್ನೇಹಿತರ ಬಳಿ ಸೌಜನ್ಯ ಹೇಳಿಕೊಂಡಿದ್ದರು ಎನ್ನಲಾಗಿದೆ.
ಡೆತ್ ನೋಟ್
ಕನ್ನಡದ ಕಿರುತೆರೆ(Kannada Tv Actress) ನಟಿ ಸೌಜನ್ಯ(Soujanya) ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ದೊಡ್ಡಬೆಲೆ ಗ್ರಾಮದ ಕುಂಬಳಗೋಡುವಿನ ಅಪಾರ್ಟ್‌ಮೆಂಟ್ ಒಂದರಲ್ಲಿ ನೇಣಿಗೆ ಶರಣಾದ ಘಟನೆ ಸಂಬಂಧ ತನಿಖೆ ಚುರುಕಾಗಿದೆ.
ಮೂಲತಃ ಕೊಡಗು(Kodagu) ಜಿಲ್ಲೆಯ ಕುಶಾಲನಗರದವರಾಗಿರುವ ಉದಯೋನ್ಮುಖ ನಟಿ ಸೌಜನ್ಯ ಅನೇಕ ಧಾರವಾಹಿಗಳಲ್ಲಿ ನಟಿಸಿದ್ದರು. ಅಲ್ಲದೇ ಚೌಕಟ್ಟು, ಫನ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇನ್ನು ಸಾವಿಗೂ ಮೊದಲು ಡೆತ್ನೋಟ್(Suicide Note) ಬರೆದಿರುವ ಸೌಜನ್ಯ 'ನನ್ನ ಸಾವಿಗೆ ಯಾರೂ ಕಾರಣರಲ್ಲ. ಅಮ್ಮ-ಅಮ್ಮ ನನ್ನನ್ನು ಕ್ಷಮಿಸಿ. ನಾನು ನಿಮ್ಮಿಬ್ಬರನ್ನೂ ತುಂಬಾ ಪ್ರೀತಿಸುವೆ. ಸದ್ಯ ನನ್ನ ಮನಸ್ಥಿತಿ ಸರಿ ಇಲ್ಲ. ಅನಾರೋಗ್ಯ ನನ್ನನ್ನು ತೀವ್ರವಾಗಿ ಕಾಡುತ್ತಿದೆ. ನಾನು ಸಾವಿನ ಮನೆಗೆ ಹೋಗುತ್ತಿದ್ದೇನೆ. ಕ್ಷಮಿಸಿ ಎಂದು ಸ್ನೇಹಿತರು ಮತ್ತು ಸಹೋದರರ ಹೆಸರನ್ನೂ ಬರೆದಿದ್ದಾರೆ. ಇಂಗ್ಲಿಷ್ನಲ್ಲಿ ಬರೆದಿರುವ ಡೆತ್ನೋಟ್ 4 ಪುಟ ಇದೆ. ಸೌಜನ್ಯರವರು ಖಿನ್ನತೆಯಿಂದ ಬಳಲುತ್ತಿದ್ದರೆನ್ನಲಾಗಿದೆ.
ಇನ್ನು ಆತ್ಮಹತ್ಯೆಗೂ ಮುನ್ನ ಸೌಜನ್ಯ ತನ್ನ ಪಿಎಯನ್ನು ತಿಂಡಿ ತರಲು ಕಳುಹಿಸಿದ್ದರು. ಆತ ಹೊರಗೆ ತೆರಳುತ್ತಿದ್ದಂತೆಯೇ ನಟಿ ನೇಣಿಗೆ ಶರಣಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ