ಆಂಧ್ರದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ| ಮುಖ ಜಜ್ಜಿದ ಸ್ಥಿತಿಯಲ್ಲಿದ್ದ ಮಹಿಳೆಯ ಬೆತ್ತಲೆ ಶವ ಪತ್ತೆ| ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ
ಹೈದರಾಬಾದ್[ಮಾ.18]: ಪಶುವೈದ್ಯೆ- ದಿಶಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಜನಮಾನಸದಿಂದ ಮಾಸುವ ಮುನ್ನವೇ ಹೈದರಾಬಾದ್ನಲ್ಲಿ ಇಂತಹುದೇ ಇನ್ನೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬೆಳಕಿಗೆ ಬಂದಿದೆ.
ರಂಗಾ ರೆಡ್ಡಿ ಜಿಲ್ಲೆಯ ಸೈಬರಾಬಾದ್ ವ್ಯಾಪ್ತಿಗೆ ಬರುವ ಚೆವೆಲ್ಲಾ ಪಟ್ಟಣದಲ್ಲಿ ಸೇತುವೆಯೊಂದರ ಕಳೆಗೆ ಮಹಿಳೆಯೊಬ್ಬಳ ನಗ್ನ ಮೃತ ದೇಹ ಪತ್ತೆ ಆಗಿದೆ. ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಮುಖದ ಗುರುತು ಸಿಗದಂತೆ ಜಜ್ಜಿ ಬರ್ಭರವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಬೇರೊಂದು ಸ್ಥಳದಲ್ಲಿ ಮಹಿಳೆಯನ್ನು ನೈಲಾನ್ ಹಗ್ಗದಿಂದ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಮೃತ ದೇಹವನ್ನು ಸೇತುವೆಯ ಕೆಳಗಿನ ಕೊಳವೆಯಲ್ಲಿ ಎಸೆದು ಹೋಗಿರುವ ಸಾಧ್ಯತೆ ಇದೆ. ಅಲ್ಲದೆ ಮಹಿಳೆಯ ಗುರುತು ಸಿಗಬಾರದು ಎಂಬ ಕಾರಣಕ್ಕೆ ಆಕೆಯನ್ನು ವಿವಸ್ತ್ರಗೊಳಿಸಿ ಮುಖವನ್ನು ಕಲ್ಲಿನಿಂದ ಜಜ್ಜಿ ಹಾಕಿದ್ದಾರೆ.
ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆಯೇ ಎಂಬುದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ ಆರೋಪಿಗಳ ಪತ್ತೆಗಳಾಗಿ ಪೊಲೀಸರ 5 ವಿಶೇಷ ತಂಡವನ್ನು ರಚಿಸಲಾಗಿದೆ.