ಭರ್ಜರಿಯಾಗಿ ಮದುವೆಯನ್ನು ಮುಗಿಸಿ ರಾತ್ರಿ ವೇಳೆ ಮರಳಿ ಮನೆಗೆ ಹೋಗುತ್ತಿದ್ದ ಮದುವೆ ದಿಬ್ಬಣದ ಮಿನಿ ಬಸ್ ಡಿಕ್ಕಿ ಹೊಡೆದು ಆಟೋದಲ್ಲಿದ್ದ ಮೂವರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗದಗ (ಫೆ.12): ಭರ್ಜರಿಯಾಗಿ ಮದುವೆಯನ್ನು ಮುಗಿಸಿ ರಾತ್ರಿ ವೇಳೆ ಮರಳಿ ಮನೆಗೆ ಹೋಗುತ್ತಿದ್ದ ಮದುವೆ ದಿಬ್ಬಣದ ಮಿನಿ ಬಸ್ ಡಿಕ್ಕಿ ಹೊಡೆದು ಆಟೋದಲ್ಲಿದ್ದ ಮೂವರ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬೆಟಗೇರಿ ಹೊರವಲಯದ ದಂಡಿನ ದುರಗಮ್ಮ ದೇವಸ್ಥಾನ ಬಳಿ ನಡೆದಿದೆ.
ಬಾಗಲಕೋಟೆಯಿಂದ ಮದುವೆ ಮುಗಿಸಿದ ಜನರನ್ನು ಕರೆದೊಯ್ಯುತ್ತಿದ್ದ ಬಸ್ ಬೆಟಗೇರಿ ಕಡೆಗೆ ಹೋಗುತ್ತಿತ್ತು. ಎದುರುಗಡೆಯಿಂದ ಗದಗ ನಗರದದಿಂದ ಹೊರಟ್ಟಿದ್ದ ಆಟೋ ನಡುವೆ ಅಪಘಾತವಾಗಿದೆ. ಎರಡೂ ವಾಹನಗಳು ವೇಗವಾಗಿದ್ದರಿಂದ ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಆಟೋದೊಳಗಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಘಟನೆಯು ಗದಗ ಜಿಲ್ಲೆಯ ಬೆಟಗೇರಿ ಹೊರವಲಯದ ದಂಡಿನ ದುರಗಮ್ಮ ದೇವಸ್ಥಾನ ಬಳಿ ನಡೆದಿದೆ. ಉಳಿದಂತೆ ಆಟೋದಲ್ಲಿದ್ದ ಇತರರಿಗೂ ಗಂಭೀರ ಗಾಯಗಳಾಗಿವೆ. ಮಿನಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಗದಗಿನ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಗದಗದ ಬೆಟಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
undefined
ಸಾಫ್ಟ್‌ವೇರ್ ದಂಪತಿಯ ದುರಂತ ಅಂತ್ಯ: ಮದುವೆಗೆ ಹೊರಟಿದ್ದವರು ಮಸಣ ಸೇರಿದರು
ಗಾಯಾಳುಗಳು ಜಿಮ್ಸ್ ಆಸ್ಪತ್ರೆಗೆ ದಾಖಲು: ಮಿನಿ ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಮೂವರು ಸಾವು ಪ್ರಕರಣದಲ್ಲಿ ಆಟೋದಲ್ಲಿದ್ದ ನರಸಾಪೂರದ ಸಯ್ಯದ್ ಅಲಿ(20) ಪ್ರದೀಪ್ (40) ಸಾವನ್ನಪ್ಪಿದ್ದಾರೆ. ಮತ್ತೊಬ್ಬ ವ್ಯಕ್ತಿ ಬೆಟಗೇರಿಯ ಮಂಜುನಾಥ ನಗರದ ನಿವಾಸಿ ನಿಖಿಲ್ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾನೆ. ಗಾಯಾಳುಗಳನ್ನ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ. ಮಿನಿ ಬಸ್ ಹಾಗೂ ಆಟೋ ನಡುವೆ ನಡೆದಿದ್ದ ಅಪಘಾತದಿಂದ ತುಸು ಹೊತ್ತು ಹೆದ್ದಾರಿಯಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ಟ್ರಾಫಿಕ್ ನಿಯಂತ್ರಣ ಮಾಡಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ತಹಶೀಲ್ದಾರ್ ಕಚೇರಿಯಲ್ಲಿ ಹೆಡ್ ಮಾಸ್ಟರ್ ಆತ್ಮಹತ್ಯೆ: ವಿಜಯಪುರ (ಫೆ.12): ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮುಖ್ಯ ಶಿಕ್ಷಕರೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಮುಖ್ಯ ಶಿಕ್ಷಕ ಬಸವರಾಜ್ ನಾಯ್ಕಲ್ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದು. ಆದರೆ, ಅನುಮಾನಾಸ್ಪದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಇದು ಆತ್ಮಹತ್ಯೆಯಾ? ಕೊಲೆಯಾ ಎನ್ನುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಸ್ಥಳಕ್ಕೆ ಸಿಂಧಗಿ ಪೊಲೀಸ್ ಠಾಣೆಯ ಪೊಲೀಸರು ಬಂದು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಆಟೋ ಟ್ರಕ್ ಮುಖಾಮುಖಿ ಡಿಕ್ಕಿ, ಭೀಕರ ಅಪಘಾತದಲ್ಲಿ ಐವರು ಶಾಲಾ ಮಕ್ಕಳ ಸಾವು, ನಾಲ್ವರು ಗಂಭೀರ!
ತುಮಕೂರು (ಫೆ.11): ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮದುವೆಗೆ ಹೊರಟಿದ್ದವರು ಮಸಣ ಸೇರಿದ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗೇಟ್ ಬಳಿ ಇಂದು ನಡೆದಿದೆ. ಮದುವೆಗೆ ಹೊರಟ್ಟಿದ್ದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದೆ. ಆದರೆ, ದಂಪತಿ ರಘು (35), ಅನುಷಾ (28) ಮೃತ ದುರ್ದೈವಿಗಳು. ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಮೃತ ದುರ್ದೈವಿಗಳು ಹಾಸನ ಜಿಲ್ಲೆ ಅರಸೀಕೆರೆ ಮೂಲದವರು ಆಗಿದ್ದಾರೆ. ಕಳೆದ ಒಂದೂವರೆ ವರ್ಷಗಳ ಹಿಂದಷ್ಟೇ ಚಿಕ್ಕನಾಯಕನಹಳ್ಳಿ ತಾಲೂಕಿನ ತಿಗಡನಹಳ್ಳಿ ಗ್ರಾಮದ ಅನುಷಾ ಜೊತೆ ಇವರ ಮದುವೆಯಾಗಿತ್ತು. ದಂಪತಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡ್ತಿದ್ದರು. ಇಂದು ಸಂಬಂಧಿಕರೊಬ್ಬರ ಮದುವೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.